HomeKarnatakaಗಮನಿಸಿ : ಜಸ್ಟ್ 2 ನಿಮಿಷದಲ್ಲಿ ಆಧಾರ್ -ರೇಷನ್ ಕಾರ್ಡ್ ಲಿಂಕ್ ಮಾಡುವುದು ಹೇಗೆ..? ಇಲ್ಲಿದೆ...

ಗಮನಿಸಿ : ಜಸ್ಟ್ 2 ನಿಮಿಷದಲ್ಲಿ ಆಧಾರ್ -ರೇಷನ್ ಕಾರ್ಡ್ ಲಿಂಕ್ ಮಾಡುವುದು ಹೇಗೆ..? ಇಲ್ಲಿದೆ ಮಾಹಿತಿ

ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮ ಪಡಿತರ ಚೀಟಿಗೆ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ ವಿಸ್ತರಿಸಿದ್ದು, ಸೆಪ್ಟೆಂಬರ್ 30 ರೊಳಗೆ ಆಧಾರ್ ಕಾರ್ಡ್ ಅನ್ನು ನಿಮ್ಮ ಪಡಿತರ ಚೀಟಿಗೆ ಲಿಂಕ್ ಮಾಡಬೇಕು.

ಪಡಿತರ ಚೀಟಿಗೆ ಆಧಾರ್ ಲಿಂಕ್ ಮಾಡುವುದು ಹೇಗೆ..?

ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮ ಪಡಿತರ ಚೀಟಿಗೆ ಆನ್ಲೈನ್ನಲ್ಲಿ ಲಿಂಕ್ ಮಾಡಲು ಈ ಕೆಳಗಿನ ಹಂತಗಳನ್ನು ಅನುಸರಿಸಿ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

• ನಿಮ್ಮ ರಾಜ್ಯದ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಪೋರ್ಟಲ್ ಅಧಿಕೃತ ವೆಬ್ಸೈಟ್ ಗೆ ಹೋಗಿ.
• ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ, ಪಡಿತರ ಚೀಟಿ ಸಂಖ್ಯೆ ಮತ್ತು ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ.
• ‘ಮುಂದುವರಿಯಿರಿ’ ಮೇಲೆ ಕ್ಲಿಕ್ ಮಾಡಿ.
• ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಒನ್ ಟೈಮ್ ಪಾಸ್ವರ್ಡ್ (ಒಟಿಪಿ) ಬರುತ್ತದೆ.
• ಒಟಿಪಿ ನಮೂದಿಸಿ ಮತ್ತು ಪಡಿತರ ಚೀಟಿ ಆಧಾರ್ ಕಾರ್ಡ್ ಲಿಂಕ್ ಕ್ಲಿಕ್ ಮಾಡಿ

ಆಧಾರ್-ಪಡಿತರ ಚೀಟಿ ಲಿಂಕ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯ ದಿನಾಂಕ 30 ಜೂನ್ 2023 ಆಗಿತ್ತು. ಈಗ ಗಡುವನ್ನು 30 ಸೆಪ್ಟೆಂಬರ್ 2023 ರವರೆಗೆ ವಿಸ್ತರಿಸಲಾಗಿದೆ, ಆದ್ದರಿಂದ ಇನ್ನೂ ತಮ್ಮ ದಾಖಲೆಗಳನ್ನು ಲಿಂಕ್ ಮಾಡದ ಜನರಿಗೆ ಸಮಯವಿದೆ. ಸೆಪ್ಟೆಂಬರ್ 30 ರೊಳಗೆ ಪಡಿತರ ಚೀಟಿಗೆ ಆಧಾರ್ ಅನ್ನು ಲಿಂಕ್ ಮಾಡಬಹುದು. ಸೆಪ್ಟೆಂಬರ್ 30 ರ ಕೊನೆಯ ದಿನಾಂಕದ ನಂತರ ತಮ್ಮ ಪಡಿತರ ಚೀಟಿಗೆ ಆಧಾರ್ ಅನ್ನು ಲಿಂಕ್ ಮಾಡಲು ಯಾರಿಗೂ ಅನುಮತಿಸಲಾಗುವುದಿಲ್ಲ. ತಮ್ಮ ದಾಖಲೆಗಳನ್ನು ಲಿಂಕ್ ಮಾಡದ ಜನರು ಹಂತಗಳನ್ನು ಪೂರ್ಣಗೊಳಿಸಬೇಕು ಎಂದು ಕೇಂದ್ರ ಸರ್ಕಾರದ ಮೂಲಗಳು ಸೂಚನೆ ನೀಡಿದೆ.ಯುಐಡಿಎಐನ ವೆಬ್ಸೈಟ್ ಮೂಲಕ ರೇಷನ್ ಕಾರ್ಡ್ ಲಿಂಕ್ ಮಾಡಬಹುದು. ರಾಜ್ಯ ಪಿಡಿಎಸ್ ವೆಬ್ಸೈಟ್ ಮೂಲಕವೂ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಜೋಡಣೆ ಮಾಡಬಹುದು, ಅಲ್ಲದೇ ಸಮೀಪದ ಪಡಿತರ ಕಚೇರಿಗೆ ಹೋಗಿ ಉಚಿತವಾಗಿ ನೀವು ಆಧಾರ್ ನಂಬರ್ ಲಿಂಕ್ ಮಾಡಬಹುದು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular