BREAKING: ಹೌರಾ-ಸಿಕಂದರಾಬಾದ್ ಫಲಕ್ ನುಮಾ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ; ಹೊತ್ತಿ ಉರಿದ 2 ಬೋಗಿಗಳು

ಹೈದರಾಬಾದ್: ಮತ್ತೊಂದು ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಹೌರಾ-ಸಿಕಂದರಾಬಾದ್ ಫಲಕ್ ನುಮಾ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಲಿಸುತ್ತಿದ್ದ ರೈಲು ಏಕಾಏಕಿ ಹೊತ್ತಿ ಉರಿದಿದೆ.

ತೆಲಂಗಾಣ ಯಾದಾದ್ರಿ ಭುವನಗಿರಿಯಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ಅವಘಡ ಸಂಭವಿಸುತ್ತಿದ್ದಂತೆ ಪ್ರಯಾಣಿಕರು ರೈಲಿನಿಂದ ಜಿಗಿದಿದ್ದಾರೆ. ರೈಲಿನ ಎರಡು ಬೋಗಿಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ.

ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಬೊಮ್ಮಾಯಿಪಲ್ಲಿ ಬಳಿ ರೈಲನ್ನು ನಿಲ್ಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read