HomeKarnatakaHSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ಹಳೆ ವಾಹನ ಮಾಲೀಕರಿಗೆ ಇಲ್ಲಿದೆ ಗುಡ್ ನ್ಯೂಸ್

HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ಹಳೆ ವಾಹನ ಮಾಲೀಕರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಹಳೆ ವಾಹನಗಳಿಗೆ HSRP ಅಳವಡಿಕೆ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ.

ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು(High Security Registration Plates-HSRP) ಅಳವಡಿಸುವುದು ಕಡ್ಡಾಯವಾಗಿದ್ದು, ಹೆಚ್.ಎಸ್.ಆರ್.ಪಿ ಅಳವಡಿಕೆಗೆ ನವೆಂಬರ್ 30 ರವರೆಗೆ ಅವಧಿ ವಿಸ್ತರಿಸಲಾಗಿದೆ.

ಸಾರ್ವಜನಿಕರು ಆನ್ ಲೈನ್ ಮೂಲಕ ಹೆಚ್.ಎಸ್.ಆರ್.ಪಿ ಪಡೆಯಲು ತೊಂದರೆಗಳಾದಲ್ಲಿ ಸಹಾಯವಾಣಿ ಸಂಖ್ಯೆ 94498 63429 / 94498 63426ಯನ್ನು ಕಚೇರಿ ಕೆಲಸದ ಸಮಯ ಬೆಳಿಗ್ಗೆ 10 ರಿಂದ ಸಂಜೆ 5.30ರೊಳಗೆ ಸಂಪರ್ಕಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾರ್ವಜನಿಕರು https://transport.karnataka.gov.in ಅಥವಾ www.siam.in ಗೆ ಭೇಟಿ ನೀಡಬಹುದು   ಎಂದು  ಸಾರಿಗೆ ಮತ್ತು  ರಸ್ತೆ ಸುರಕ್ಷತೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular