HomeBusinessHSRP ನಂಬರ್ ಪ್ಲೇಟ್ ಅಳವಡಿಕೆ ಅವಧಿ ಫೆಬ್ರವರಿವರೆಗೆ ವಿಸ್ತರಣೆ: ಸಚಿವ ರಾಮಲಿಂಗಾರೆಡ್ಡಿ

HSRP ನಂಬರ್ ಪ್ಲೇಟ್ ಅಳವಡಿಕೆ ಅವಧಿ ಫೆಬ್ರವರಿವರೆಗೆ ವಿಸ್ತರಣೆ: ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ(ಸುವರ್ಣಸೌಧ): ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್(HSRP) ಅಳವಡಿಸುವ ಅವಧಿಯನ್ನು 2024ರ ಫೆಬ್ರವರಿವರೆಗೆ ವಿಸ್ತರಿಸಲಾಗಿದೆ.

ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಯಶವಂತರಾಯಗೌಡ ಪಾಟೀಲ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರ ಸರ್ಕಾರದ ಆದೇಶದ ಅನುಸಾರ 2019 ನವೆಂಬರ್ 1ರ ನಂತರ ರಾಜ್ಯದಲ್ಲಿ ಮಾರಾಟವಾದ ಎಲ್ಲಾ ವಾಹನಗಳಿಗೂ ಹೆಚ್.ಎಸ್.ಆರ್.ಪಿ. ನಂಬರ್ ಪ್ಲೇಟ್ ಕಡ್ಡಾಯವಾಗಿದೆ. ಹಳೇ ವಾಹನಗಳಿಗೆ ನಂಬರ್ ಪ್ಲೇಟ್ ಬದಲಾವಣೆ ಮಾಡಿಕೊಳ್ಳಲು ಫೆಬ್ರವರಿವರೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular