HomeKarnatakaBIG NEWS: HSRP ಅಳವಡಿಸದ ವಾಹನಗಳಿಗೆ ಸೆ. 18ರವರೆಗೆ ದಂಡದಿಂದ ವಿನಾಯಿತಿ

BIG NEWS: HSRP ಅಳವಡಿಸದ ವಾಹನಗಳಿಗೆ ಸೆ. 18ರವರೆಗೆ ದಂಡದಿಂದ ವಿನಾಯಿತಿ

ಅತಿ ಸುರಕ್ಷಿತ ನೋಂದಣಿ ಫಲಕ (ಹೆಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸಂಬಂಧಿಸಿ ಹೈಕೋರ್ಟ್‌ನಲ್ಲಿ ಸೆಪ್ಟೆಂಬರ್‌ 18 ರಂದು ವಿಚಾರಣೆ ನಡೆಯಲಿದ್ದು, ಅಲ್ಲಿಯವರೆಗೆ ದಂಡ ವಿಧಿಸದಿರಲು ಸಾರಿಗೆ ಇಲಾಖೆ ನಿರ್ಧರಿಸಿದೆ.

ʼಹೆಚ್‌ಎಸ್‌ಆರ್‌ಪಿ ಅಳವಡಿಕೆಯ ಮೂರು ತಿಂಗಳ ಅವಧಿ ಈಗ ಮುಗಿದಿದೆ. ಸೆಪ್ಟೆಂಬರ್‌ 18ಕ್ಕೆ ಹೈಕೋರ್ಟ್‌ ನೀಡುವ ಆದೇಶ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಅಲ್ಲಿಯವರೆಗೆ ಬಲವಂತದ ಕ್ರಮ ಇರುವುದಿಲ್ಲ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

HSRP  ಅಳವಡಿಸಿದ ವಾಹನಗಳಿಗೆ ಸೆ. 16ರಿಂದ ದಂಡ ವಿಧಿಸಲಾಗುವುದು ಎಂದು ಹೇಳಲಾಗಿತ್ತು. ಆದರೆ, ಈ ಸಂಬಂಧ ಸಲ್ಲಿಕೆಯಾದ ಅರ್ಜಿ ವಿಚಾರಣೆ ಸೆ. 18ರಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ಹೀಗಾಗಿ ಸದ್ಯಕ್ಕೆ ಸಾರಿಗೆ ಇಲಾಖೆ ಅಧಿಕಾರಿಗಳು ದಂಡ ವಿಧಿಸುವ ಬಗ್ಗೆ ತೀರ್ಮಾನಿಸಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಚಾರಣೆಯ ನಂತರ ದಂಡ ವಿಧಿಸಬೇಕೆ ಅಥವಾ ಗಡುವು ವಿಸ್ತರಿಸಬೇಕೆ ಎನ್ನುವ ನಿರ್ಧಾರ ಕೈಗೊಳ್ಳಲಾಗುವುದು. 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ಹಳೆಯ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯವಾಗಿದೆ. ರಾಜ್ಯದಲ್ಲಿ ಇನ್ನೂ ಸುಮಾರು 1 ಕೋಟಿ ವಾಹನಗಳಿಗೆ HSRP ಅಳವಡಿಸಿಕೊಳ್ಳಬೇಕಿರುವುದರಿಂದ ಗಡುವು ವಿಸ್ತರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular