HomeAutoHSRP ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ಸೋಮವಾರದಿಂದಲೇ ದಂಡ ಫಿಕ್ಸ್: 2 ಸಲ ಫೈನ್, 3ನೇ...

HSRP ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ಸೋಮವಾರದಿಂದಲೇ ದಂಡ ಫಿಕ್ಸ್: 2 ಸಲ ಫೈನ್, 3ನೇ ಬಾರಿ ವಾಹನ ಜಪ್ತಿ ಸಾಧ್ಯತೆ

ಬೆಂಗಳೂರು: ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ(HSRP) ಅಳವಡಿಕೆಗೆ ರಾಜ್ಯ ಸರ್ಕಾರ ನೀಡಿದ್ದ ಗಡುವು ಸೆಪ್ಟೆಂಬರ್ 15ಕ್ಕೆ ಮುಕ್ತಾಯವಾಗಲಿದೆ. ಸೆಪ್ಟೆಂಬರ್ 16 ರಿಂದ ಹೆಚ್ಎಸ್ಆರ್ಪಿ ಅಳವಡಿಸದ ವಾಹನಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.

HSRP ಇಲ್ಲದ ವಾಹನಗಳಿಗೆ ಎರಡು ಬಾರಿ ದಂಡ ವಿಧಿಸಿ ಮೂರನೇ ಬಾರಿಗೆ ವಾಹನ ಜಪ್ತಿ ಮಾಡುವ ಬಗ್ಗೆ ಸಾರಿಗೆ ಇಲಾಖೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ನಿರ್ದೇಶನದ ಅನ್ವಯ 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ವಾಹನಗಳಿಗೆ HSRP ಅಳವಡಿಸುವುದು ಕಡ್ಡಾಯವಾಗಿದೆ. ರಾಜ್ಯದಲ್ಲಿ ಸುಮಾರು ಎರಡು ಕೋಟಿ ವಾಹನಗಳು HSRP ಅಳವಡಿಸಿಕೊಳ್ಳಬೇಕಿದೆ. ಸುಮಾರು 52 ಲಕ್ಷ ವಾಹನಗಳಿಗೆ ಮಾತ್ರ HSRP ಅಳವಡಿಸಲಾಗಿದ್ದು, ಇನ್ನೂ 1.48 ಕೋಟಿ ವಾಹನಗಳು ಹೆಚ್ಎಸ್ಆರ್ಪಿ ಅಳವಡಿಸಿಕೊಳ್ಳಬೇಕಿದೆ. ಇದುವರೆಗೆ 4 ಬಾರಿ ಗಡುವು ವಿಸ್ತರಿಸಿದ್ದರೂ ವಾಹನ ಸವಾರರು ಆಸಕ್ತಿ ತೋರಿಸದ ಕಾರಣ ಸೆಪ್ಟೆಂಬರ್ 16 ರಿಂದ ದಂಡ ವಿಧಿಸುವ ಪ್ರಕ್ರಿಯೆ ಆರಂಭವಾಗಲಿದೆ. ಮತ್ತೊಮ್ಮೆ ಗಡುವು ವಿಸ್ತರಿಸುವ ಸಾಧ್ಯತೆ ಕಡಿಮೆ ಇದೆ. ರಾಜ್ಯಾದ್ಯಂತ ಸೋಮವಾರದಿಂದ ವಾಹನಗಳ ತಪಾಸಣೆ ನಡೆಸಿ ದಂಡ ವಿಧಿಸಲಾಗುವುದು ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular