HomeBusinessಫೆ. 17ಕ್ಕೆ ಮುಕ್ತಾಯವಾಗಲಿರುವ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ ಸಾಧ್ಯತೆ

ಫೆ. 17ಕ್ಕೆ ಮುಕ್ತಾಯವಾಗಲಿರುವ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ ಸಾಧ್ಯತೆ

ಬೆಂಗಳೂರು: ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ನೀಡಲಾಗಿದ್ದ ಗಡುವು ಫೆಬ್ರವರಿ 17ಕ್ಕೆ ಮುಕ್ತಾಯವಾಗಲಿದ್ದು, ಅದನ್ನು ವಿಸ್ತರಿಸಲು ಸಾರಿಗೆ ಇಲಾಖೆ ಚಿಂತನೆ ನಡೆಸಿದೆ.

ಏಕರೂಪ ನೋಂದಣಿ ಫಲಕ ಅಳವಡಿಕೆ, ವಾಹನಗಳ ಸುರಕ್ಷತೆ, ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ರಾಜ್ಯದಲ್ಲಿ ವಾಹನಗಳಿಗೆ ಅತಿ ಸುರಕ್ಷತಾ ನೋಂದಣಿ ಫಲಕ ಅಳವಡಿಸಿಕೆ ಕಡ್ಡಾಯಗೊಳಿಸಲಾಗಿದೆ. ಫೆಬ್ರವರಿ 17ರವರೆಗೆ HSRP ಅಳವಡಿಕೆಗೆ ಗಡುವು ನೀಡಲಾಗಿದೆ.

ಇದುವರೆಗೆ ಕಡಿಮೆ ಸಂಖ್ಯೆಯ ವಾಹನಗಳ ಮಾಲೀಕರು HSRP ಅಳವಡಿಸಿಕೊಂಡಿದ್ದಾರೆ. ಆನ್ಲೈನ್ ನಲ್ಲಿ ಬುಕಿಂಗ್ ವೇಳೆ ತಾಂತ್ರಿಕ ಸಮಸ್ಯೆ ಹೆಚ್ಚುರುವುದರಿಂದ ಮತ್ತೆ ಗಡುವು ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಫೆ. 17ರ ನಂತರವೂ HSRP ಅಳವಡಿಕೆಗೆ ಅವಕಾಶ ನೀಡಲು ಸಾರಿಗೆ ಇಲಾಖೆ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular