ಕೇಂದ್ರದಿಂದ ಗುಡ್ ನ್ಯೂಸ್: ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ವಿಸ್ತರಣೆಗೆ 273 ಕೋಟಿ ರೂ. ರಿಲೀಸ್

ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ವಿಸ್ತರಣೆಗೆ ಕೇಂದ್ರ ಸರ್ಕಾರ 273 ಕೋಟಿ ರೂ. ಬಿಡುಗಡೆ ಮಾಡಿದೆ. ಟರ್ಮಿನಲ್ ಕಟ್ಟಡ ಸೇರಿದಂತೆ ಇತರೆ ಸೌಲಭ್ಯಗಳ ಸುಧಾರಣೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರ 273 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ

ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ಸಂಬಂಧಿಸಿದಂತೆ ನಮ್ಮ ಪ್ರಸ್ತಾವನೆಗೆ ಶೀಘ್ರವಾಗಿ ಸ್ಪಂದಿಸಿ 273 ಕೋಟಿ ರೂ.ಬಿಡುಗಡೆ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂದಿಯಾ  ಅವರಿಗೆ ಸಮಸ್ತ ಉತ್ತರ ಕರ್ನಾಟಕದ ಜನತೆಯ ಪರವಾಗಿ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

ನೂತನ ಯೋಜನೆಯಂತೆ ವಿಮಾನ ನಿಲ್ದಾಣದ ಟರ್ಮಿನಲ್ 20,000 ಚ.ಮೀ ವಿಸ್ತರಣೆಗೊಳ್ಳಲಿದ್ದು(ನೆಲಮಹಡಿ ಹಾಗೂ ಮೊದಲ ಮಹಡಿ ಸೇರಿ) ಹಾಗೂ ಏಕಕಾಲಕ್ಕೆ 1400ಕ್ಕೂ ಅಧಿಕ ಪ್ರಯಾಣಿಕರನ್ನು(ಆಗಮಿಸುವ ಮತ್ತು ನಿರ್ಗಮಿಸುವ) ನಿರ್ವಹಿಸುವ ಸಾಮರ್ಥ್ಯ ಹೊಂದಲಿದೆ. ವಿಸ್ತರಣೆ ಕಾಮಗಾರಿ ಜನವರಿಯಲ್ಲಿ ಆರಂಭವಾಗಲಿದ್ದು, ಎರಡು ವರ್ಷಗಳಲ್ಲಿ ಪ್ರಯಾಣಿಕರ ಉಪಯೋಗಕ್ಕೆ ಮುಕ್ತವಾಗಿಸುವ ಗುರಿ ಹೊಂದಿದೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read