BREAKING: ಕಾಮಗಾರಿ ವೇಳೆ ತಲೆ ಮೇಲೆ ರಾಡ್ ಬಿದ್ದು ಗಾಯಗೊಂಡಿದ್ದ ಎಎಸ್ಐ ಸಾವು

ಹುಬ್ಬಳ್ಳಿ: ಕಾಮಗಾರಿ ವೇಳೆ ಕಬ್ಬಿಣದ ರಾಡ್ ತಲೆ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಎಎಸ್ಐ ಮೃತಪಟ್ಟಿದ್ದಾರೆ.

ನಾಭಿರಾಜ್ ದಯಣ್ಣವರ ಮೃತಪಟ್ಟವರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

ಹುಬ್ಬಳ್ಳಿಯ ಕೋರ್ಟ್ ಸರ್ಕಲ್, ಕಿತ್ತೂರು ಚೆನ್ನಮ್ಮ ಬಳಿ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದ್ದು, ಸೆಪ್ಟೆಂಬರ್ 10ರಂದು ಕರ್ತವ್ಯದಲ್ಲಿದ್ದ ವೇಳೆ ತಲೆ ಮೇಲೆ ಕಬ್ಬಿಣದ ಬಿದ್ದು ಉಪ ನಗರ ಠಾಣೆ ಎಎಸ್ಐ ನಾಭಿರಾಜ್ ಗಾಯಗೊಂಡಿದ್ದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಉಸ್ತುವಾರಿ ಸಚಿವ ಸಂತೋಷ್ ಲಾಡ್, ಜಿಲ್ಲಾಧಿಕಾರಿ ದಿವ್ಯ ಪ್ರಭು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ನಾಭಿರಾಜ್ ಮೃತಪಟ್ಟಿದ್ದಾರೆ.

ಕಾಮಗಾರಿ ಸ್ಥಳದಲ್ಲಿ ಯಾವುದೇ ರೀತಿಯ ಸುರಕ್ಷತಾ ಕ್ರಮ ಕೈಗೊಳ್ಳದೆ ರಾರ್ ಗಳನ್ನು ಜೋಡಿಸಲಾಗುತ್ತಿತ್ತು. ಈ ವೇಳೆ ಅವಘಡ ಸಂಭವಿಸಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read