ಹುಬ್ಬಳ್ಳಿ- ಬೆಂಗಳೂರು ಮಾರ್ಗದ ವಿಶೇಷ ಸೂಪರ್ ಫಾಸ್ಟ್ ರೈಲನ್ನು ಡಿಸೆಂಬರ್ 8 ರಿಂದ ಪ್ರತಿನಿತ್ಯ ಸಂಚರಿಸಲು ರೇಲ್ವೆ ಇಲಾಖೆ ನಮ್ಮ ಒತ್ತಾಯದಂತೆ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಈ ಕುರಿತು ನಾನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಮನವಿ ಸಲ್ಲಿಸಿದ್ದೆ. ಈಗ ನಮ್ಮ ಮನವಿಗೆ ಸ್ಪಂದಿಸಿ ಸಚಿವರು ಹುಬ್ಬಳ್ಳಿಯಿಂದ ಬೆಂಗಳೂರಿಗೆ ದೈನಂದಿನ ರೈಲು ಸಂಚಾರಕ್ಕೆ ಅನುಮೋದನೆ ನೀಡಿದ್ದಾರೆ.
ರೈಲು ಸಂಖ್ಯೆ: 20687 UBL ( ಹುಬ್ಬಳ್ಳಿ) – 20688 SBC (ಬೆಂಗಳೂರು) ಮಾರ್ಗದಲ್ಲಿ ಸಂಚರಿಸಲಿದೆ.
ವಾಣಿಜ್ಯ ನಗರಿ ಹುಬ್ಬಳ್ಳಿಯನ್ನು ರಾಜ್ಯದ ರಾಜಧಾನಿ ಬೆಂಗಳೂರಿಗೆ ಸಂಪರ್ಕಿಸುವ ಈ ಹೊಸ ರೈಲು ಸಮಸ್ತ ಉತ್ತರ ಕರ್ನಾಟಕದ ಅಭಿವೃದ್ದಿಯ ಜೊತೆಗೆ ವಾಣಿಜ್ಯೋದ್ಯಮಕ್ಕೂ ಅನುಕೂಲವಾಗಲಿದೆ.
ಹುಬ್ಬಳ್ಳಿ, ಕರ್ಜಗಿ, ಹಾವೇರಿ, ರಾಣೇಬೆನ್ನೂರು, ದಾವಣಗೆರೆ, ಬೀರೂರು, ಅರಸೀಕೆರೆ, ಸಂಪಿಗೆ ರೋಡ್, ತುಮಕೂರು, ಯಶವಂತಪುರದಲ್ಲಿ ನಿಲುಗಡೆ ಇದೆ.
ಸಮಸ್ತ ಉತ್ತರ ಕರ್ನಾಟಕದ ಜನತೆಯ ಪರವಾಗಿ ನಮ್ಮ ಮನವಿಗೆ ಸ್ಪಂದಿಸುತ್ತ ಈ ಭಾಗದ ರೈಲ್ವೆ ಅಭಿವೃದ್ಧಿಗೆ ಸ್ಪಂದಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್, ವಿ.ಸೋಮಣ್ಣ ಅವರಿಗೆ ಪ್ರಲ್ಹಾದ್ ಜೋಶಿ ಧನ್ಯವಾದ ಹೇಳಿದ್ದಾರೆ.
