HomeKarnatakaSHOCKING: ಧಾರವಾಡದಲ್ಲಿ ಮೂರು ವರ್ಷಗಳಲ್ಲಿ ಬರೋಬ್ಬರಿ 1,691 ಬಾಲ ಗರ್ಭಿಣಿ ಪ್ರಕರಣ ಪತ್ತೆ: ಬೆಚ್ಚಿ ಬೀಳಿಸುವಂತಿದೆ...

SHOCKING: ಧಾರವಾಡದಲ್ಲಿ ಮೂರು ವರ್ಷಗಳಲ್ಲಿ ಬರೋಬ್ಬರಿ 1,691 ಬಾಲ ಗರ್ಭಿಣಿ ಪ್ರಕರಣ ಪತ್ತೆ: ಬೆಚ್ಚಿ ಬೀಳಿಸುವಂತಿದೆ ಅಪ್ರಾಪ್ತೆಯರು ಗರ್ಭಿಣಿಯರಾಗುತ್ತಿರುವ ಅಂಕಿ-ಅಂಶ

ಧಾರವಾಡ: ಹುಬ್ಬಳ್ಳಿಯಲ್ಲಿ ಒಂದೇ ವಾರದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರು ಮಗುವಿಗೆ ಜನ್ಮ ನೀಡಿರುವ ಪ್ರಕರಣ ಬೆಳಕಿಗೆ ಬಂದಿರುವ ಬೆನ್ನಲ್ಲೇ ರಾಜ್ಯವೇ ಬೆಚ್ಚಿ ಬೀಳುವಂತಹ ವರದಿಯೊಂದು ಬಯಲಾಗಿದೆ. ಹುಬ್ಬಳ್ಳಿ-ಧಾರವಾಡ ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚುತ್ತಿದ್ದು, ಅಂಕಿ-ಅಂಶಗಳು ನೀಡಿರುವ ವರದಿ ಇಡೀ ಸಮಾಜ ತಲೆತಗ್ಗಿಸುವಂತೆ ಮಾಡಿದೆ.

ಜಿಲ್ಲೆಯಾದ್ಯಂತ ಕಳೆದ ಮೂರು ವರ್ಷಗಳಲ್ಲಿ ಬರೋಬ್ಬರಿ 1,691 ಬಾಲ ಗರ್ಭಿಣಿ ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಹೆತ್ತವರು ಮತ್ತು ಖಾಸಗಿ ಆಸ್ಪತ್ರೆಗಳು ಪ್ರಕರಣಗಳನ್ನು ಮುಚ್ಚಿಡುತ್ತಿದ್ದರೂ, ಮಕ್ಕಳ ರಕ್ಷಣಾ ಘಟಕದ ಕಾರ್ಯಾಚರಣೆಯಿಂದಾಗಿ ಈ ಆಘಾತಕಾರಿ ಅಂಶ ಬಹಿರಂಗವಾಗಿದೆ.

ಧಾರವಾಡ ಜಿಲ್ಲೆಯಲ್ಲಿ ಕೇವಲ ಮೂರು ವರ್ಷಗಳಲ್ಲಿ ಅಧಿಕೃತವಾಗಿಯೇ 1,691 ಬಾಲ ಗರ್ಭಿಣಿ ಪ್ರಕರಣಗಳು ವರದಿಯಾಗಿರುವುದು ಇಡೀ ಜಿಲ್ಲೆಯನ್ನು ಆತಂಕಕ್ಕೆ ತಳ್ಳಿದೆ. ಇಲಾಖೆಯ ಅಧಿಕೃತ ಮಾಹಿತಿಯ ಪ್ರಕಾರ, ಕಳೆದ 2024 ರಲ್ಲಿ 801 ಪ್ರಕರಣಗಳು ವರದಿಯಾಗಿದ್ದರೆ, 2025 ರಲ್ಲಿ 624 ಪ್ರಕರಣಗಳು ಮತ್ತು ಈ ವರ್ಷ 2026ರ ಕೇವಲ ಕಳೆದ ಆರು ತಿಂಗಳಲ್ಲೇ ಬರೋಬ್ಬರಿ 216 ಪ್ರಕರಣಗಳು ವರದಿಯಾಗಿವೆ. ಇವು ಕೇವಲ ಅಧಿಕೃತವಾಗಿ ಇಲಾಖೆಯ ಗಮನಕ್ಕೆ ಬಂದಿರುವ ಅಂಕಿ-ಅಂಶಗಳಾಗಿದ್ದು, ಇನ್ನು ಬೆಳಕಿಗೆ ಬಾರದೇ ಇರುವ ಅನೇಕ ಘಟನೆಗಳು ಜಿಲ್ಲೆಯಲ್ಲಿ ನಡೆಯುತ್ತಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ವಾರವಷ್ಟೇ ಹುಬ್ಬಳ್ಳಿ ಕಿಮ್ಸ್‌ನಲ್ಲಿ 15 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಪ್ರಕರಣ ಮಾಸುವ ಮುನ್ನವೇ, ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ 15 ವರ್ಷ 6 ತಿಂಗಳ ಅಪ್ರಾಪ್ತ ಬಾಲಕಿಗೆ ಪರಿಚಿತ ಯುವಕನೊಬ್ಬ ಪುಸಲಾಯಿಸಿ ನಿರಂತರ ಅತ್ಯಾಚಾರ ಎಸಗಿದ್ದರಿಂದ, ಆಕೆ ಮೂರು ತಿಂಗಳ ಹಿಂದೆಯೇ ಜೆ.ಸಿ ನಗರದ ಅನ್ನಪೂರ್ಣ ನರ್ಸಿಂಗ್ ಹೋಂನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಅಷ್ಟೇ ಅಲ್ಲದೆ, ಪ್ರಸ್ತುತ ಆ ಬಾಲಕಿ ಮತ್ತೆ ಒಂದೂವರೆ ತಿಂಗಳ ಗರ್ಭಿಣಿಯಾಗಿದ್ದಾಳೆ. ಇನ್ನು ಹೆರಿಗೆಯಾದ ಮಗುವನ್ನು ಸಾಕದೆ ಸಂಬಂಧಿಕರಿಗೆ ನೀಡಲಾಗಿದೆ ಎಂದು ಪಾಲಕರು ಹೇಳುತ್ತಿದ್ದರೂ, ಮಗುವನ್ನು ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಈ ಪ್ರಕರಣದ ಮಾಹಿತಿ ಇದ್ದರೂ ಹೆರಿಗೆ ಮಾಡಿಸಿದ ಖಾಸಗಿ ಆಸ್ಪತ್ರೆಯ ಇಬ್ಬರು ವೈದ್ಯರು ಪೊಲೀಸರಿಗಾಗಲಿ ಅಥವಾ ಮಕ್ಕಳ ರಕ್ಷಣಾ ಘಟಕಕ್ಕಾಗಲಿ ಯಾವುದೇ ಮಾಹಿತಿ ನೀಡದೆ ಪ್ರಕರಣ ಮುಚ್ಚಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಾಶ್ ಕೊಡ್ಲಿವಾಡ ಅವರು ನೀಡಿದ ದೂರಿನ ಮೇರೆಗೆ ಅತ್ಯಾಚಾರ ಎಸಗಿದ ಯುವಕ, ಸತ್ಯ ಮುಚ್ಚಿಟ್ಟ ಪೋಷಕರು ಹಾಗೂ ಇಬ್ಬರು ವೈದ್ಯರ ವಿರುದ್ಧ ಹಳೆ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, . ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular