HomeKarnatakaಗಣೇಶಮೂರ್ತಿ ಆಗಮನ ಮೆರವಣಿಗೆ ವೇಳೆ ಕಿಡಿಗೇಡಿಗಳ ಕಿರುಕುಳ: ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಗಣೇಶಮೂರ್ತಿ ಆಗಮನ ಮೆರವಣಿಗೆ ವೇಳೆ ಕಿಡಿಗೇಡಿಗಳ ಕಿರುಕುಳ: ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿ: ನಾಡಿನಾದ್ಯಂತ ಗೌರಿ-ಗಣೇಶ ಹಬ್ಬದ ಸಡಗರ-ಸಂಭ್ರಮ ಮನೆ ಮಾಡಿದೆ. ಗಣೇಶ ಮೂರ್ತಿ ಕರೆತರುವ ವೇಳೆ ಕಿಡುಗೇಡಿ ಯುವಕರು ಮಹಿಳೆಯರಿಗೆ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಗಣಪತಿ ಮೂರ್ತಿ ತರುವಾಗ ಮೆರವಣಿಗೆ ವೇಳೆ ಅಪರಿಚಿತ ಯುವಕರು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಈ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ನಿನ್ನೆ ರಾತ್ರಿ 9:30ರ ವೇಳೆಗೆ ಹುಬ್ಬಳ್ಳಿಯಲ್ಲಿ ಈ ಘಟನೆ ನಡೆದಿದೆ. ಮರಾಠ ಗಲ್ಲಿಯಿಂದ ಸಿಬಿಟಿ ಕಡೆಗೆ ಹೋಗುವ ರಸ್ತೆಯ ಬಳಿ ಮೇದಾರ್ ಓಣಿಯ ಗಣಪತಿ ಮತ್ತು ಕಲಾಲ್ ಓಣಿಯ ಗಣಪತಿ ಮೆರವಣಿಗೆಗಳು ಮುಖಾಮುಖಿಯಾದವು. ಈ ವೇಳೆ ಕಲಾಲ್ ಓಣಿಯ ಗಣಪತಿ ಮೆರವಣಿಗೆಯ ಡಿಜೆ ಸಂಗ್ ಮುಂದೆ ಕೆಲವು ಯುವಕರು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾರ್ವಜನಿಕರು ಯುವಕರನ್ನು ತಡೆಯಲು ಮುಂದಾದ ವೇಳೆ ಗಲಾಟೆಯಾಗಿದೆ. ತಕ್ಷಣ ಪೊಲೀಸರು ಮಧ್ಯಪ್ರವೇಶಿಸಿ ಕಿಡಿಗೇಡಿಗಳನ್ನು ಚದುರಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ, ಕಿಡಿಗೇಡಿಗಳನ್ನು ಕೆಲವೇ ನಿಮಿಷಗಳಲ್ಲಿ ಬಲಪ್ರಯೋಗ ಮಾಡಿ ಅಲ್ಲಿಂದ ಚದುರಿಸಲಾಯಿತು ಎಂದು ತಿಳಿಸಿದ್ದಾರೆ.

ಗಣೇಶ ಮೆರವಣಿಗೆ ವೇಳೆ ನಡೆದ ಈ ಅನಿರೀಕ್ಷಿತ ಘಟನೆಯಿಂದಾಗಿ ಕೆಲ ಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ಮಹಿಳೆಯರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಹಬ್ಬದ ವೇಳೆ ಕಾನೂನು ಸುವ್ಯವಸ್ಥೆಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ. ಸಾರ್ವಜನಿಕರ ಸುರಕ್ಷತೆಗಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಮತ್ತು ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಗೌರಿ-ಗಣೇಶ ಹಬ್ಬ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಾದ್ಯಂತ ಪೊಲೀಸರು ಕಟ್ಟೆಚ್ಚವಹಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular