ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬವನ್ನು ಆಚರಿಸಲು ನಾಲ್ಕು ಸಂಘಗಳಿಗೆ ಅನುಮತಿ ನೀಡಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಂಗೀಕರಿಸಿದ ನಿರ್ಣಯದ ಅನುಷ್ಠಾನ ಮತ್ತು ಕಾರ್ಯಾಚರಣೆಯಲ್ಲಿ ಮಧ್ಯಪ್ರವೇಶಿಸಲು ಕರ್ನಾಟಕ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಶುಕ್ರವಾರ ಹೈಕೋರ್ಟ್‌ನ ಧಾರವಾಡ ಪೀಠದಲ್ಲಿ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರು ಆಗಸ್ಟ್ 31 ರಂದು ಅಂಗೀಕರಿಸಿದ ನಿರ್ಣಯವನ್ನು ಪ್ರಶ್ನಿಸಿ ಅಂಜುಮನ್-ಇ-ಇಸ್ಲಾಂ ಸಲ್ಲಿಸಿದ ಅರ್ಜಿಯನ್ನು ಆಲಿಸಿದರು.
ಮಹಾನಗರ ಪಾಲಿಕೆ, ಮೇಯರ್ ಮತ್ತು ರಾಜ್ಯ ನಗರಾಭಿವೃದ್ಧಿ ಇಲಾಖೆಯನ್ನು ಅರ್ಜಿಯಲ್ಲಿ ಕಕ್ಷಿದಾರರನ್ನಾಗಿ ಹೆಸರಿಸಲಾಗಿದೆ.
ಅಂಜುಮನ್-ಇ-ಇಸ್ಲಾಂ, ಒಂದು ಎಕರೆ ಭೂಮಿಯಲ್ಲಿ 999 ವರ್ಷಗಳ ಗುತ್ತಿಗೆಗೆ ಹಕ್ಕು ಸಾಧಿಸಿದೆ. ಪ್ರಸ್ತುತ ರಾಜ್ಯ ಸರ್ಕಾರದ ಅನುಮೋದನೆಗೆ ಬಾಕಿ ಇರುವ ಪಾಲಿಕೆ ನಿರ್ಣಯ ಸಂಪೂರ್ಣವಾಗಿ ಕಾನೂನುಬಾಹಿರವಾಗಿದೆ ಎಂದು ತನ್ನ ಅರ್ಜಿಯಲ್ಲಿ ವಾದಿಸಿದೆ.
ಈ ಅನುಮತಿಯು ಕರ್ನಾಟಕ ಮುನಿಸಿಪಲ್ ಕಾರ್ಪೊರೇಷನ್ ಕಾಯ್ದೆ ಮತ್ತು ಪೂಜಾ ಸ್ಥಳಗಳ ಕಾಯಿದೆಯ ನಿಬಂಧನೆಗಳಿಗೆ ವಿರುದ್ಧವಾಗಿದೆ ಎಂದು ಟ್ರಸ್ಟ್ ಪ್ರತಿಪಾದಿಸಿದೆ. ಎರಡೂ ಸಮುದಾಯಗಳ ಭಾವೋದ್ರೇಕ ಮತ್ತು ಭಾವನೆಗಳಿಗೆ ಅನಗತ್ಯವಾಗಿ ಬೆಂಕಿ ಹಚ್ಚುವ ಉದ್ದೇಶದ ಪಾಲಿಕೆಯ ನಿರ್ಣಯವನ್ನು ರದ್ದುಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಮೈದಾನದಲ್ಲಿ ಗಣೇಶ ಹಬ್ಬ ನಡೆಸಲು ಖಾಸಗಿ ಸಂಸ್ಥೆಗಳಿಗೆ ಅನುಮತಿ ನೀಡಿರುವುದು ಸೇರಿದಂತೆ ಮೂರು ನಿರ್ಣಯಗಳನ್ನು ಪ್ರತಿಪಕ್ಷಗಳ ಗಮನಕ್ಕೆ ಬಾರದೆ ಗುಟ್ಟಾಗಿ ಹೆಚ್ಚುವರಿ ಪಟ್ಟಿಗೆ ಸೇರಿಸಲಾಗಿದೆ ಎಂದು ಪಾಲಿಕೆ ವಿರೋಧ ಪಕ್ಷದ ನಾಯಕಿ ಸುವರ್ಣ ಮಣಿಕುಂಟ್ಲ ದೂರಿದ್ದಾರೆ.
ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ವಿಳಂಬ: ಸಿಎಂ ಸಿದ್ದರಾಮಯ್ಯ ಪ್ರತಿಕೃತಿ ದಹಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಲು ವಿಳಂಬವಾಗಿದೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಕರ್ನಾಟಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹಿಸಿದರು.
ಬಿಜೆಪಿ ಆರೋಪ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಕಾರ್ಯಕ್ರಮಕ್ಕೆ ಅನುಮತಿ ನೀಡದೇ ಕಾಲಹರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಒತ್ತಡಕ್ಕೆ ಸ್ಥಳೀಯ ಅಧಿಕಾರಿಗಳು ಮಣಿಯುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ನಗರಸಭೆಯ ಠರಾವು ಆಧರಿಸಿ ಚೆನ್ನಮ್ಮ ವೃತ್ತದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಶೀಘ್ರ ಅನುಮತಿ ನೀಡುವಂತೆ ಬಿಜೆಪಿ ಆಯುಕ್ತರನ್ನು ಒತ್ತಾಯಿಸಿದೆ. ಶಾಸಕರಾದ ಅರವಿಂದ ಬೆಲ್ಲದ್, ಮಹೇಶ್ ಟೆಂಗಿನಕಾಯಿ ನೇತೃತ್ವದಲ್ಲಿ ಬಿಜೆಪಿ ಪಾಲಿಕೆ ಸದಸ್ಯರು ಮುಖಂಡರು ಹಾಗೂ ಬೆಂಬಲಿಗರೊಂದಿಗೆ ಗುರುವಾರ ಪಾಲಿಕೆ ಆಯುಕ್ತರನ್ನು ಭೇಟಿ ಮಾಡಿ ಅನುಮತಿ ನೀಡುವಂತೆ ಒತ್ತಾಯಿಸಿದರು.
ಸಕಾರಾತ್ಮಕ ಸ್ಪಂದನೆಯಾಗಲಿ, ಭರವಸೆಯಾಗಲಿ ದೊರೆಯದ ಕಾರಣ ಬೇಸರಗೊಂಡ ಅವರು ಆಯುಕ್ತರ ಕಚೇರಿ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ವೇಳೆ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬಕ್ಕೆ ಸಾರ್ವಜನಿಕ ಆಚರಣೆಗೆ ಅನುಮತಿ ನೀಡುವಂತೆ ಕೋರಿ ಭಜನೆ ಮಾಡಿದ್ದಾರೆ.
ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಕಾನೂನು ಸುವ್ಯವಸ್ಥೆ ಸೇರಿದಂತೆ ನಾನಾ ಅಂಶಗಳನ್ನು ಪರಿಗಣಿಸಬೇಕು ಎಂದು ಆಯುಕ್ತ ಉಳ್ಳಾಗಡ್ಡಿ ಸ್ಪಷ್ಟಪಡಿಸಿದರು. ಈ ಕುರಿತು ಧಾರವಾಡ ಜಿಲ್ಲಾಧಿಕಾರಿಗಳ ಅಭಿಪ್ರಾಯ ಕೇಳಿರುವುದಾಗಿ ತಿಳಿಸಿದ್ದಾರೆ.
ಸಂಚಾರ ಸುಗಮ
ಪ್ರತಿಭಟನೆಯಿಂದ ಉಂಟಾದ ಸಂಚಾರ ದಟ್ಟಣೆ ಬಗ್ಗೆ ಮಾತನಾಡಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಅವರು, ನಾವು ತಕ್ಷಣ ಎಲ್ಲಾ ಸಂಚಾರವನ್ನು ಬದಲಾಯಿಸಿದ್ದೇವೆ, ನಾವು ಅನಗತ್ಯವಾಗಿ ಜನರಿಗೆ ತೊಂದರೆಯಾಗದಂತೆ ನಾವು ನೋಡಿದ್ದೇವೆ, ನಾವು ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಅವರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರನ್ನು ಬಲವಂತವಾಗಿ ತೆರವು ಮಾಡುಕುತ್ತಿಲ್ಲ ಎಂದು ಅವರು ಹೇಳಿದ್ದಾರೆ.
#WATCH | Police Commissioner of Hubballi Dharwad, Renuka Sukumar says, "We have immediately diverted all the traffic. We have ensured that people need not face problems unnecessarily. You can see that the traffic movement has commenced normally now…" https://t.co/LXJHlhXlbO pic.twitter.com/yde2T041uT
— ANI (@ANI) September 15, 2023