HomeKarnatakaಮಾಂಜಾ ದಾರ ಸಂಗ್ರಹಿಸಿದ್ದ ಅಂಗಡಿಗಳ ಮೇಲೆ ಪೊಲೀಸರ ದಿಢೀರ್ ದಾಳಿ: 500ಕ್ಕೂ ಹೆಚ್ಚು ರೋಲ್ ಜಪ್ತಿ:...

ಮಾಂಜಾ ದಾರ ಸಂಗ್ರಹಿಸಿದ್ದ ಅಂಗಡಿಗಳ ಮೇಲೆ ಪೊಲೀಸರ ದಿಢೀರ್ ದಾಳಿ: 500ಕ್ಕೂ ಹೆಚ್ಚು ರೋಲ್ ಜಪ್ತಿ: 12 ಕ್ರಿಮಿನಲ್ ಕೇಸ್ ದಾಖಲು

ಹುಬ್ಬಳ್ಳಿ: ಮಾಂಜಾ ದಾರ ನಿಷೇಧವಾಗಿದ್ದರೂ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಳಿಪಟ ಹಾರಿಸುವ ಮಾಂಜಾ ದಾರದ ಹಾವಳಿ ಹೆಚ್ಚಾಗಿದೆ. ಹುಬ್ಬಳ್ಳಿಯಲ್ಲಿ ಪೊಲೀಸರು ಅಂಗಡಿಗಳ ಮೇಲೆ ದಾಳಿ ನಡೆಸಿ ಮಾಂಜಾ ದಾರಗಳನ್ನು ಜಪ್ತಿ ಮಾಡುತ್ತಿದ್ದಾರೆ.

ಹುಬ್ಬಳ್ಳಿಯಲ್ಲಿ ನಿನ್ನೆ ಗುರುವಾರ ಮಾಂಜಾ ದಾರಕ್ಕೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಇಂದು ಮಾಂಜಾ ದಾರದಿಂದಾಗಿ ಬೈಕ್ ಸವಾರನ ಮೂಗು ಕಟ್ ಆಗಿರುವ ಘಟನೆ ನಡೆದಿದೆ. ಮಾಂಜಾ ದಾರದಿಂದ ಸಾಲು ಸಾಲು ಅನಾಹುತಗಳು ಸಂಭವಿಸುತ್ತಿರುವುದರಿಂದ ಎಚ್ಚೆತ್ತ ಹುಬ್ಬಳ್ಳಿ-ಧಾರವಾಡ ಪೊಲೀಸರು ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುಬ್ಬಳ್ಳಿ ಧಾರವಾಡದ ಹಲವೆಡೆ ಪೊಲಿಸರು ದಾಳಿ ನಡೆಸಿದ್ದಾರೆ. ಸಾರ್ವಜನಿಕರ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಅಧಿಕಾರಿಗಳು, 500ಕ್ಕೂ ಹೆಚ್ಚು ನಿಷೇಧಿತ ಮಾಂಜಾ ದಾರದ ರೋಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಇದೇ ವೇಳೆ ಮಾಂಜಾ ದಾರ ಮಾರಾಟಗಾರರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು, ಹುಬ್ಬಳ್ಳಿ-ಧಾರವಾಡ ಅವಳಿ ನಗರದ ವ್ಯಾಪ್ತಿಯಲ್ಲಿ ಒಟ್ಟು 12 ಕೇಸ್ ದಾಖಲಾಗಿದೆ ಎಂದು ಹುಬ್ಬಳ್ಳಿ ಪೊಲೀಸ್ ಆಯುಕ್ತ ಭೂಷಣ ಬೋರಸೆ ತಿಳಿಸಿದ್ದಾರೆ.

ನಿನ್ನೆ ಮಾಂಜಾ ದಾರದಿಂದ ಮಹಿಳೆಯೊಬ್ಬರ ಜೀವ ಕಳೆದುಕೊಂಡಿದ್ದಾರೆ. ಸಾಕಷ್ಟು ಜಾಗೃತಿ ಮೂಡಿಸಿದ್ದರೂ ಒಂದು ಜೀವ ಹೋಗಿದೆ. ಹೀಗಾಗಿ ಮಾಂಜಾ ದಾರ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದು, ಹುಬ್ಬಳ್ಳಿ – ಧಾರವಾಡ ಅವಳಿ ನಗರದ ವ್ಯಾಪ್ತಿಯಲ್ಲಿ ಬಿಎನ್‌ಎಸ್ 120ಬಿ ಅಡಿಯಲ್ಲಿ 12 ಕ್ರಿಮಿನಲ್ ಕೇಸ್ ದಾಖಲಾಗಿದೆ ಎಂದು ತಿಳಿಸಿದ್ದಾರೆ.

ಅವಳಿ ನಗರದಲ್ಲಿ ವಿವಿಧೆಡೆ ದಾಳಿ ಮಾಡಲಾಗಿದ್ದು, ಪಾಲಿಕೆ ಆಯುಕ್ತರಿಗೂ ಪತ್ರ ಬರೆದಿದ್ದೇವೆ. ಪಾಲಿಕೆ ಮತ್ತು ಹೆಸ್ಕಾಂ ಸಹಕಾರದಿಂದ ವಿದ್ಯುತ್ ಕಂಬ ಗಿಡಮರಗಳಲ್ಲಿ ಜೋತು ಬಿದ್ದ ಮಾಂಜಾ ದಾರ ತಗೆಸಲು ಕ್ರಮ ಕೈಗೊಳ್ಳಲಾಗಿದೆ. ಯಾರೇ ಮಾಂಜಾ ದಾರ ಬಳಕೆ ಮಾಡಿದ್ರೆ ತಕ್ಷಣವೇ 112ಗೆ ಮಾಹಿತಿ ನೀಡಿ ಎಂದು ತಿಳಿಸಿದ್ದಾರೆ.

ನಿನ್ನೆ ಮಾಂಜಾ ದಾಅರಕ್ಕೆ ಸಿಲುಕಿ ಮಹಿಳೆ ಸಾವನ್ನಪಿದ್ದರು. ಘಟನೆಯ ಹಿನ್ನೆಲೆ ಸ್ಥಳ ಪರಿಶೀಲನೆ ಮಾಡಿದ್ದೇವೆ. ಆ ಸಂದರ್ಭದಲ್ಲಿ ಯಾರೂ ಗಾಳಿಪಟ ಹಾರಿಸುತ್ತಿರಲಿಲ್ಲ. ಆದರೆ ಮರದಲ್ಲಿ ಮೂರು-ನಾಲ್ಕು ಗಾಳಿಪಟ ಸಿಲುಕಿಕೊಂಡಿದ್ದವು. ಅದರಲ್ಲೊಂದು ಹಾರಿ ರಸ್ತೆ ಮೇಲೆ ಬಂದಿದ್ದರಿಂದ ದುರ್ಘಟನೆ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

ಕೆ.ಪಿ.ಎಸ್.ಸಿ ಬಳಿಕ ಇದೀಗ ಕೆ.ಎಸ್.ಒ.ಯು ಸರದಿ: ಪದವಿ, ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಮೂಹಿಕ ನಕಲು ಮಾಡಲು ಅವಕಾಶ: ಪರೀಕ್ಷೆ ಬಳಿಕ ಹಣ ವಸೂಲಿ

ಶಿವಮೊಗ್ಗ: ಕೆ.ಪಿ.ಎಸ್‌.ಸಿ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷಾ ಅಕ್ರಮ ತನಿಖೆ ಹಂತದಲ್ಲಿರುವಾಗಲೇ ಮತ್ತೊಂದು ಪರೀಕ್ಷಾ ಅಕ್ರಮ ಬೆಳಕಿಗೆ ಬಾಂದಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕಚೇರಿಯಲ್ಲಿ ಪರೀಕ್ಷೆಯಲ್ಲಿ ಮಾಸ್ ಕಾಪಿಗೆ ಅವಕಾಶ ನೀಡಲಾಗಿದೆ.

ಶಿವಮೊಗ್ಗ ನಗರದ ಆಲ್ಕೋಳ ಸರ್ಕಲ್ ಸಮೀಪವಿರುವ ಕೆ.ಎಸ್‌.ಓ.ಯು ಪ್ರಾದೇಶಿಕ ಕಚೇರಿಯ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಕಳೆದ ಕೆಲವು ದಿನಗಳಿಂದ ಕರ್ನಾಟಕ ರಾಜ್ಯ ಮುಕ್ತ ವಿವಿಯ ಪರೀಕ್ಷೆಗಳು ನಡೆಯುತ್ತಿದೆ. ಈ ವೇಳೆ ಸಾಮೂಹಿಕ ನಕಲು ಮಾಡಲು ಅವಕಾಶ ನೀಡಲಾಗಿದೆ. ಅಕ್ಟೋಬರ್ 7ರಿಂದ ಆರಂಭವಾಗಿರುವ ಮುಕ್ತ ವಿವಿಯ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳು ನವೆಂಬರ್ 20ರವರೆಗೆ ನಡೆಯಲಿವೆ.

ಹಣ ಕೊಟ್ಟರೇ ಮೊಬೈಲ್, ಪುಸ್ತಕ ನೋಡಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.ಕೆ.ಎಸ್‌.ಓ.ಯು ಶಿವಮೊಗ್ಗ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ನಿರ್ದೇಶಕ ಬಿ.ಎಂ. ಸ್ವಾಮಿ ನೇತೃತ್ವದಲ್ಲಿ ಹಣ ಪಡೆದು ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಸಾಮೂಹಿಕ ನಕಲು ಮಾಡಿಸುತ್ತಿರುವುದು ಬೆಳಕಿಗೆ ಬಂದಿದೆ.

ಹಣ ಕೊಟ್ಟು ಪರೀಕ್ಷೆಯನ್ನು ಹೇಗೆ ಬೇಕಾದರೂ ಬರೆಯಬಹುದು, ಹಣ ಕೊಟ್ಟವರಿಗೆ ಪುಸ್ತಕ ಮತ್ತು ಮೊಬೈಲ್ ಇಟ್ಟುಕೊಂಡೇ ಪರೀಕ್ಷೆ ಬರೆಯಲು ಮುಕ್ತ ಅವಕಾಶ ಕಲ್ಪಿಸಲಾಗಿದೆ. ಹಣ ನೀಡಿದವರಿಗೆ ಎರಡನೇ ಫ್ಲೋರ್‌ನಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಹಣ ನೀಡದವರಿಗೆ ಮೊದಲ ಫ್ಲೋರ್‌ನಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತಿದೆ.

ವಿದ್ಯಾರ್ಥಿಗಳು ಪುಸ್ತಕ ಹಾಗೂ ಮೊಬೈಲ್ ನೋಡಿ ಪರೀಕ್ಷೆ ಬರೆಯುತ್ತಿರುವ ಸಾಮೂಹಿಕ ನಕಲು ಮಾಡುತ್ತಿರುವ ವಿಡಿಯೋಗಳು ವೈರಲ್ ಆಗಿವೆ. ಸಿಬ್ಬಂದಿಯನ್ನು ಮುಂದೆ ಬಿಟ್ಟು ಹಣ ಸಂಗ್ರಹಿಸಿ, ಮುಕ್ತವಾಗಿ ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ಮಾಡಿಕೊಡಲಾಗುತ್ತಿದೆ.

ಪರೀಕ್ಷೆ ಆರಂಭವಾದ ಅರ್ಧ ಗಂಟೆ ಬಳಿಕ ವಿದ್ಯಾರ್ಥಿಗಳ ಲೆಕ್ಕ ಮಾಡಲು ಪ್ರಾದೇಶಿಕ ನಿರ್ದೇಶಕ ಸ್ವಾಮಿ ಅವರು ಬರುತ್ತಿದ್ದರು. ಅದೇ ಸಮಯದಲ್ಲಿ ಪರೀಕ್ಷಾ ಕೇಂದ್ರದ ಪ್ರತ್ಯೇಕ ಕೊಠಡಿಯಲ್ಲಿ ಖುದ್ದಾಗಿ ನಿಂತು ಅವರು ಸಾಮೂಹಿಕ ನಕಲು ಮಾಡಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬಳಿಕ ಎಸ್ ಡಿಸಿಗಳಾದ ವಿನಯಾ ಕೆ.ಜೆ., ನಿಂಗಾ ನಾಯ್ಕ್, ಅಟೆಂಡರ್ ಯೋಗೇಶ್ ಗೌಡ ಹಾಗೂ ಡಾಟಾ ಎಂಟ್ರಿ ಆಪರೇಟರ್ ಹರೀಶ್ ಅವರನ್ನು ಮುಂದೆ ಬಿಟ್ಟು ಹಣ ವಸೂಲಿ ಮಾಡಿಸಲಾಗುತ್ತದೆ.

ಒಂದು ವಿಷಯಕ್ಕೆ ಒಂದು ಸಾವಿರ ರೂ.ನಂತೆ ಓರ್ವ ವಿದ್ಯಾರ್ಥಿಯಿಂದ ಹಣ ವಸೂಲಿ ಮಾಡುತ್ತಿರುವ ಆರೋಪವಿದ್ದು, ಪ್ರತಿನಿತ್ಯ 70 ರಿಂದ 100 ವಿದ್ಯಾರ್ಥಿಗಳ ಬಳಿ ಪರೀಕ್ಷೆ ಮುಗಿದ ಬಳಿಕ ಹಣ ವಸೂಲಿ ಮಾಡಲಾಗುತ್ತಿದೆ. ಪರೀಕ್ಷೆ ಬರೆದ ನಂತರ ಅಲ್ಲೇ ವಿದ್ಯಾರ್ಥಿಗಳಿಂದ ಫೋನ್ ಪೇ ಅಥವಾ ಗೂಗಲ್ ಪೇ ಮಾಡಿಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular