HomeKarnatakaBREAKING : ರಾಜ್ಯದಲ್ಲಿ ಮಾಂಜಾ ದಾರಕ್ಕೆ ಮತ್ತೊಂದು ಬಲಿ; ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆ ದುರ್ಮರಣ!

BREAKING : ರಾಜ್ಯದಲ್ಲಿ ಮಾಂಜಾ ದಾರಕ್ಕೆ ಮತ್ತೊಂದು ಬಲಿ; ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆ ದುರ್ಮರಣ!

ಹುಬ್ಬಳ್ಳಿ: ಗಾಳಿಪಟ ಹಾರಿಸಲು ಬಳಸುವ ಅಪಾಯಕಾರಿ ಮಾಂಜಾ ದಾರಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಕುತ್ತಿಗೆಗೆ ಮಾಂಜಾ ದಾರ ಸಿಲುಕಿದ ಪರಿಣಾಮ ಅವರು ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಶಿವಶಂಕರ ಕಾಲೋನಿಯಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ವಿದ್ಯಾ ಮಂಜುನಾಥ ಗೌಡರ (38) ಎಂದು ಗುರುತಿಸಲಾಗಿದೆ. ಇವರು ಹುಬ್ಬಳ್ಳಿ ನಗರದ ಭರತ್ ನಗರದ ನಿವಾಸಿಯಾಗಿದ್ದು, ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಕೆಲಸದ ನಿಮಿತ್ತ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಗಾಳಿಪಟಕ್ಕೆ ಬಳಸುವ ಮಾಂಜಾ ದಾರ ಮಹಿಳೆಯ ಕುತ್ತಿಗೆಗೆ ಸಿಲುಕಿದೆ ಎನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಕಿಮ್ಸ್ ಗೆ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ  ಭೇಟಿ ನೀಡಿದ್ದಾರೆ.ಘಟನೆಯ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೀವಕ್ಕೆ ಕಂಟಕವಾಗುತ್ತಿರುವ ಮಾಂಜಾ ದಾರ!

ಗಾಳಿಪಟ ಹಾರಿಸಲು ಬಳಸುವ ಗಾಜಿನ ಪುಡಿ ಲೇಪಿತ ಮಾಂಜಾ ದಾರವು ವಾಹನ ಸವಾರರು ಹಾಗೂ ಪಾದಚಾರಿಗಳ ಪಾಲಿಗೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ರಸ್ತೆಗಳಲ್ಲಿ ಅಡ್ಡವಾಗಿ ಸಿಲುಕುವ ಈ ದಾರ ಕುತ್ತಿಗೆ ಸೇರಿದಂತೆ ದೇಹದ ಸೂಕ್ಷ್ಮ ಭಾಗಗಳಿಗೆ ಗಂಭೀರ ಗಾಯಗಳನ್ನು ಉಂಟುಮಾಡಬಹುದು.

ಹೀಗಾಗಿ, ಸಾರ್ವಜನಿಕರು ಅಪಾಯಕಾರಿ ಮಾಂಜಾ ದಾರವನ್ನು ಬಳಸುವುದನ್ನು ಮತ್ತು ರಸ್ತೆಗಳಲ್ಲಿ ಬಿಸಾಡುವುದನ್ನು ತಪ್ಪಿಸಬೇಕು. ಗಾಳಿಪಟ ಹಾರಿಸುವಾಗಲೂ ಜನರ ಸಂಚಾರವಿರುವ ರಸ್ತೆಗಳಿಂದ ದೂರವಿದ್ದು, ಇತರರ ಜೀವಕ್ಕೆ ಅಪಾಯವಾಗದಂತೆ ಎಚ್ಚರಿಕೆ ವಹಿಸುವುದು ಅತ್ಯಗತ್ಯ.

ಪೊಲೀಸ್ ಮತ್ತು ನ್ಯಾಯಾಂಗ ಪರಸ್ಪರ ಪೂರಕವಾಗಿ ಕಾರ್ಯನಿರ್ವಹಿಸಿದರೆ ಕಾನೂನುಬದ್ಧ ಆಡಳಿತ ಸಾಧ್ಯ

ಪೊಲೀಸ್ ಇಲಾಖೆ ಹಾಗೂ ನ್ಯಾಯಾಂಗ ಇಲಾಖೆಗಳು ಪರಸ್ಪರ ಪೂರಕವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ದೇಶದಲ್ಲಿ ಕಾನೂನುಬದ್ಧ ಆಡಳಿತವನ್ನು (ರೂಲ್ ಆಫ್ ಲಾ) ಬಲವಾಗಿ ಎತ್ತಿಹಿಡಿಯಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಸಿದ್ದಲಿಂಗ ಪ್ರಭು ಅವರು ಹೇಳಿದರು.

ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬುಧವಾರ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹುತಾತ್ಮರ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು.

ಕಳೆದ ಸಾಲಿನಲ್ಲಿ ಕರ್ತವ್ಯದ ವೇಳೆ ಹುತಾತ್ಮರಾದ ಕರ್ನಾಟಕ ಸೇರಿದಂತೆ ದೇಶಾದ್ಯಂತ ಒಟ್ಟು 154 ವೀರ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳ ತ್ಯಾಗ ಮತ್ತು ಬಲಿದಾನವನ್ನು ಅವರು ಸ್ಮರಿಸಿ, ಅವರ ಕುಟುಂಬಗಳಿಗೆ ಸಾಂತ್ವನ ತಿಳಿಸಿದರು.

ದೇಶದ ಆಂತರಿಕ ಭದ್ರತೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಅಪರಾಧಗಳನ್ನು ತಡೆಗಟ್ಟುವುದು ಮತ್ತು ಬೇರುಸಹಿತ ಕಿತ್ತೊಗೆಯುವಲ್ಲಿ ಪೊಲೀಸ್ ಇಲಾಖೆಯ ಪಾತ್ರ ಅತ್ಯಂತ ಮಹತ್ವದ್ದು. ನಾಗರಿಕರ ಮೂಲಭೂತ ಹಕ್ಕುಗಳನ್ನು ಸಂರಕ್ಷಿಸುವಲ್ಲಿ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು.

ಮೈಸೂರಿನಲ್ಲಿ ದಸರಾ ವಸ್ತುಪ್ರದರ್ಶನದ ವೇಳೆ ನಡೆದ ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಪೊಲೀಸರು ಸಮರ್ಥವಾಗಿ ತನಿಖೆ ನಡೆಸಿ, ಯಾವುದೇ ಪ್ರತ್ಯಕ್ಷ ಸಾಕ್ಷ್ಯಾಧಾರಗಳಿಲ್ಲದಿದ್ದರೂ ಎಲೆಕ್ಟ್ರಾನಿಕ್ ಸಾಕ್ಷ್ಯಗಳ ಆಧಾರದಲ್ಲಿ ಕೇವಲ ಒಂದು ವರ್ಷದೊಳಗೆ ಮರಣದಂಡನೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದ ನಿದರ್ಶನವನ್ನು ಅವರು ಶ್ಲಾಘಿಸಿದರು.

ಪೊಲೀಸ್ ಅಧಿಕಾರಿಗಳು ಪ್ರಕರಣಗಳ ತನಿಖೆ ವೇಳೆ ಕೇವಲ ಸಂಖ್ಯೆಗೆ ಮಹತ್ವ ನೀಡದೆ, ಗುಣಮಟ್ಟದ ತನಿಖೆ ನಡೆಸಿ ನ್ಯಾಯಾಲಯಕ್ಕೆ ಸೂಕ್ತ ಸಾಕ್ಷ್ಯಾಧಾರಗಳನ್ನು ಸಲ್ಲಿಸಬೇಕು. ಇದು ಸಮಾಜದ ಶಾಂತಿ ಕದಡುವ ದುಷ್ಟ ಶಕ್ತಿಗಳಿಗೆ ತಕ್ಕ ಪಾಠ ಕಲಿಸಲು ನೆರವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ. ಪೆನ್ನೇಕರ್ ಅವರು ಮಾತನಾಡಿ, 1959ರಲ್ಲಿ ಲಡಾಖ್‌ನ ಹಾಟ್‌ಸ್ಪ್ರಿಂಗ್ ಪ್ರದೇಶದಲ್ಲಿ ಚೀನಾ ಸೈನಿಕರ ಅನಿರೀಕ್ಷಿತ ದಾಳಿಯ ವಿರುದ್ಧ ಡಿವೈಎಸ್‌ಪಿ ಕರಣ್ ಸಿಂಗ್ ಅವರ ನೇತೃತ್ವದಲ್ಲಿ ಧೈರ್ಯದಿಂದ ಹೋರಾಡಿ ವೀರಮರಣವನ್ನಪ್ಪಿದ 10 ಮಂದಿ ಸಿಆರ್‌ಪಿಎಫ್ ಜವಾನರ ತ್ಯಾಗವನ್ನು ಸ್ಮರಿಸಿ, ಪ್ರತಿ ವರ್ಷ ಅಕ್ಟೋಬರ್ 21 ರಂದು ರಾಷ್ಟ್ರದಾದ್ಯಂತ ಈ ದಿನವನ್ನು ಆಚರಿಸಲಾಗುತ್ತದೆ ಎಂದು ತಿಳಿಸಿದರು.

ಕಳೆದ ಒಂದು ವರ್ಷದ ಅವಧಿಯಲ್ಲಿ ಕರ್ತವ್ಯ ಪಾಲನೆ ಮಾಡುತ್ತಾ ದೇಶಾದ್ಯಂತ ಒಟ್ಟು 154 ಮಂದಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದವರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಪಡೆಯ ಇನ್‌ಸ್ಪೆಕ್ಟರ್ ಪಂಚಯ್ಯ ವೀರಯ್ಯ ಸಾಲಿಮಠ, ಎಎಸ್‌ಐ ಬಸವರಾಜ್ ಎಂ.ಎಲ್., ಹೆಡ್ ಕಾನ್‌ಸ್ಟೇಬಲ್ ಬೀರಲಿಂಗ, ಹೆಡ್ ಕಾನ್‌ಸ್ಟೇಬಲ್ ಎ.ಎಂ. ಸಲ್ಮಾನ್ ತಾಪಿ ಹಾಗೂ ಹೆಡ್ ಕಾನ್‌ಸ್ಟೇಬಲ್ ಇಸ್ಮಾಯಿಲ್ ಸೇರಿದಂತೆ ಐವರು ಸಿಬ್ಬಂದಿ ಸೇರಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ರಾಜ್ಯಗಳ ಪೊಲೀಸ್ ಪಡೆಗಳು, ಸಿಆರ್‌ಪಿಎಫ್, ಬಿಎಸ್‌ಎಫ್, ಐಟಿಬಿಪಿ, ಸಿಐಎಸ್‌ಎಫ್, ಆರ್‌ಪಿಎಫ್ ಸೇರಿದಂತೆ ಅರೆಸೇನಾ ಪಡೆಗಳ ಹುತಾತ್ಮ ಅಧಿಕಾರಿ ಮತ್ತು ಸಿಬ್ಬಂದಿಯ ಹೆಸರುಗಳನ್ನು ಗೌರವಪೂರ್ವಕವಾಗಿ ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿದರು.

ಕಾರ್ಯಕ್ರಮದಲ್ಲಿ ಗಣ್ಯರು ಹುತಾತ್ಮರಿಗೆ ಪುಷ್ಪಗುಚ್ಛ ಅರ್ಪಿಸಿ ಗೌರವ ನಮನ ಸಲ್ಲಿಸಿದರು. ಹುತಾತ್ಮರ ಗೌರವ ಸೂಚಕವಾಗಿ ಮೂರು ಸಾರಿ ಕುಶಾಲುತೋಪು ಹಾರಿಸುವ ಮೂಲಕ ಸಂತಾಪ ಸೂಚಿಸಿದರು.

ಈ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ನವೀನ್ ಕುಮಾರ್.ಎನ್ ಸೇರಿದಂತೆ ಡಿವೈಎಸ್ಪಿಗಳು, ಸಿಪಿಐಗಳು ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular