HomeKarnatakaBREAKING : ಹುಬ್ಬಳ್ಳಿಯಲ್ಲಿ ಹಾಡಹಗಲೇ ಯುವಕನ ಬರ್ಬರ ಹತ್ಯೆ..! ಸಾಯೋವರೆಗೂ ಕೊಚ್ಚಿ ಕೊಂದ ದುಷ್ಕರ್ಮಿಗಳು

BREAKING : ಹುಬ್ಬಳ್ಳಿಯಲ್ಲಿ ಹಾಡಹಗಲೇ ಯುವಕನ ಬರ್ಬರ ಹತ್ಯೆ..! ಸಾಯೋವರೆಗೂ ಕೊಚ್ಚಿ ಕೊಂದ ದುಷ್ಕರ್ಮಿಗಳು

 

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹಾಡಹಗಲೇ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ನಗರದ ಸಿದ್ದೇಶ್ವರ ಪಾರ್ಕ್‌ ಬಳಿ ನಡೆದ ಈ ಕೃತ್ಯದಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವಕನ ಮೇಲೆ ದಾಳಿ

ಮಟಮಟ ಮಧ್ಯಾಹ್ನ ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಯುವಕ ತಪ್ಪಿಸಿಕೊಳ್ಳಲು ಯತ್ನಿಸಿದರೂ ಬಿಡದ ಆರೋಪಿಗಳು ಸಾಯುವವರೆಗೂ ಕೊಚ್ಚಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಲೆಯಾದ ವ್ಯಕ್ತಿ ಯಾರು?

ಸದ್ಯ ಕೊಲೆಯಾದ ಯುವಕನ ಗುರುತು ಹಾಗೂ ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಯಾಕಿಷ್ಟು ದ್ವೇಷ? ಹತ್ಯೆಗೆ ಕಾರಣವೇನು? ಎಂಬ ಪ್ರಶ್ನೆಗಳು ಇದೀಗ ಮೂಡಿವೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದು, ಹಾಡಹಗಲೇ ನಡೆದ ಈ ಕೃತ್ಯದಿಂದ ಪೊಲೀಸರ ಭಯವೇ ಇಲ್ಲವೇ? ಎಂಬ ಆತಂಕವೂ ಸಾರ್ವಜನಿಕರಲ್ಲಿ ವ್ಯಕ್ತವಾಗಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular