HomeKarnatakaಯುವತಿಯೊಂದಿಗೆ ಅಸಭ್ಯ ವರ್ತನೆ: ಯುವಕ ಅರೆಸ್ಟ್

ಯುವತಿಯೊಂದಿಗೆ ಅಸಭ್ಯ ವರ್ತನೆ: ಯುವಕ ಅರೆಸ್ಟ್

ಹುಬ್ಬಳ್ಳಿ: ರಸ್ತೆಯಲ್ಲಿ ಯುವಕನೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಯುವತಿ ಎಂದಿನಂತೆ ಕೆಲಸ ಮುಗಿಸಿ ಕಾರಿನಲ್ಲಿ ಮನೆಗೆ ತೆರಳುತ್ತಿದ್ದಳು. ಬೈರಿದೇವರಕೊಪ್ಪದ ಸನಾ ಕಾಲೇಜು ಬಳಿ ಸ್ಕೂಟಿಯಲ್ಲಿ ಬರುತ್ತಿದ್ದ ಯುವಕ ಕಾರು ಓವರ್ ಟೇಕ್ ಮಾಡಿ ಕಾರಿನಲ್ಲಿದ್ದ ಯುವತಿಗೆ ಚುಡಾಯಿಸಿದ್ದಾನೆ. ಇದನ್ನು ಯುವತಿ ತನ್ನ ಮೊಬೈಲ್ ಕ್ಯಾಮರಾದಲ್ಲಿ ರೆಕಾರ್ಡ್ ಮಾಡಿದ್ದಾಳೆ.

ಈ ವೇಳೆ ಯುವಕ ಮತ್ತೆ ಕಾರನ್ನು ಓವರ್ ಟೇಕ್ ಮಾಡಿ ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಯುವಕ ಅಶ್ಲೀಲ ಪದಬಳಕೆ ಮಾಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಇದೀಗ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular