HomeKarnatakaಭೀಕರ ಅಪಘಾತಕ್ಕೆ ಸ್ಥಳದಲ್ಲೇ ಇಬ್ಬರು ದುರ್ಮರಣ; ಛಿದ್ರ ಛಿದ್ರಗೊಂಡ ದೇಹಗಳು

ಭೀಕರ ಅಪಘಾತಕ್ಕೆ ಸ್ಥಳದಲ್ಲೇ ಇಬ್ಬರು ದುರ್ಮರಣ; ಛಿದ್ರ ಛಿದ್ರಗೊಂಡ ದೇಹಗಳು

ಹುಬ್ಬಳ್ಳಿ: ಮಳೆ ಅಬ್ಬರದ ನಡುವೆಯೇ ರಸ್ತೆ ಅಪಘಾತಗಳು ಹೆಚ್ಚುತ್ತಿದ್ದು, ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ಹೊರವಲಯದಲ್ಲಿ ನಡೆದಿದೆ.

ಗೋಕುಲ ಗ್ರಾಮದ ದಾರಾವತಿ ಹನುಮಂತ ದೇವಸ್ಥಾನದ ಬೈಪಾಸ್ ಬಳಿ ಅಪಘಾತ ಸಂಭವಿಸಿದ್ದು, ಮೃತದೇಹಗಳು ಗುರುತು ಸಿಗದ ರೀತಿಯಲ್ಲಿ ಛಿದ್ರ ಛಿದ್ರಗೊಂಡಿವೆ.

ಅಪಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಹುಬ್ಬಳ್ಳಿ ಉತ್ತರ ಸಂಚಾರಿ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಪತ್ತೆಗಾಗಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular