HomeKarnatakaBIG NEWS: ಅಂಜಲಿ ಹತ್ಯೆ ಪ್ರಕರಣದ ಆರೋಪಿಯಿಂದ ಇನ್ನೊಂದು ಕಿರಿಕ್; ರೈಲಿನಲ್ಲಿ ಮಹಿಳೆಗೆ ಚಾಕು ತೋರಿಸಿ...

BIG NEWS: ಅಂಜಲಿ ಹತ್ಯೆ ಪ್ರಕರಣದ ಆರೋಪಿಯಿಂದ ಇನ್ನೊಂದು ಕಿರಿಕ್; ರೈಲಿನಲ್ಲಿ ಮಹಿಳೆಗೆ ಚಾಕು ತೋರಿಸಿ ಹೆದರಿಸಿದ್ದ ಹಂತಕ

ಹುಬ್ಬಳ್ಳಿ: ಹುಬ್ಬಳ್ಳಿಯ ಯುವತಿ ಅಂಜಲಿ ಅಂಬಿಗೇರಳನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ನನ್ನು ದಾವಣಗೆರೆ ರೈಲು ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಮೈಸೂರಿನಿಂದ ಹುಬ್ಬಳ್ಳಿಗೆ ರೈಲಿನಲ್ಲಿ ತೆರಳುತ್ತಿದ್ದ ಈತ ರೈಲಿನಲ್ಲಿಯೂ ಕಿರುಕ್ ಮಾಡಿದ್ದ. ರೈಲಿನಲ್ಲಿ ತುಮಕೂರು ಮೂಲದ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ್ದ. ಈ ವೇಳೆ ಉಳಿದ ಪ್ರಯಾಣಿಕರು ಆರೋಪಿ ಗಿರೀಶ್ ನನ್ನು ಹಿಡಿದು ಥಳಿಸಿದ್ದರು. ಅಲ್ಲದೇ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಬಳಿಕ ದಾವಣಗೆರೆಯ ಮಾಯಕೊಂಡನಹಳ್ಳಿ ರೈಲು ನಿಲ್ದಾಣದಲ್ಲಿ ರೈಲಿನಿಂದ ಜಿಗಿದು ತಪ್ಪಿಸಿಕೊಳ್ಳಲು ಯತ್ನಿಸಿದ್ದ ಈ ವೇಳೆ ಆರೋಪಿ ವಿಶ್ವ ಅಲಿಯಾಸ್ ಗಿರೀಶನನ್ನು ಪೊಲೀಸರು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂಜಲಿಯನ್ನು ಕೊಲೆ ಮಾಡಿದ ಬಳಿಕ ಹುಬ್ಬಳ್ಳಿಯಿಂದ ಹಾವೇರಿಗೆ ತೆರಳಿದ್ದ ಆರೋಪಿ ಬಳಿಕ ಹಾವೇರಿಯಿಂದ ಮೈಸೂರಿಗೆ ರೈಲಿನಲ್ಲಿ ಹೋಗಿದ್ದ. ಬಳಿಕ ಮಹಾರಾಜ ಹೋಟೆಲ್ ನಲ್ಲಿ ಮಲಗಿದ್ದ. ನಂತರ ಮೈಸೂರಿನಿಂದ ಹುಬ್ಬಳ್ಳಿಗೆ ವಾಪಾಸ್ ಆಗುತ್ತಿದ್ದಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಹುಬ್ಬಳ್ಳಿಯಿಂದ ಬೆಳಗಾವಿ, ಮಹಾರಷ್ಟ್ರಗೆ ತೆರಳಿ ತಲೆಮರೆಸಿಕೊಳ್ಳುವುದು ಆರೋಪಿ ಪ್ಲಾನ್ ಆಗಿತ್ತು ಎನ್ನಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular