HomeLatest NewsBREAKING: ಸಿಎಂ ಸಿದ್ದರಾಮಯ್ಯ ಭಾಗವಹಿಸಬೇಕಿದ್ದ ಕಾರ್ಯಕ್ರಮದಲ್ಲಿ ಅವಘಡ: ವೇದಿಕೆ ಮುಂಭಾಗ ಹಾಕಿದ್ದ ಬೃಹತ್ ಕಟೌಟ್ ಕುಸಿತ:...

BREAKING: ಸಿಎಂ ಸಿದ್ದರಾಮಯ್ಯ ಭಾಗವಹಿಸಬೇಕಿದ್ದ ಕಾರ್ಯಕ್ರಮದಲ್ಲಿ ಅವಘಡ: ವೇದಿಕೆ ಮುಂಭಾಗ ಹಾಕಿದ್ದ ಬೃಹತ್ ಕಟೌಟ್ ಕುಸಿತ: ಮೂವರ ಸ್ಥಿತಿ ಗಂಭಿರ

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಬೇಕಿದ್ದ ಕಾರ್ಯಕ್ರಮದಲ್ಲಿ ಅವಘಡ ಸಂಭವಿಸಿದ್ದು, ಬೃಹತ್ ಕಟೌಟ್ ಗಳು ಕುಸಿದು ಬಿದ್ದು ಮೂವರು ಗಂಭಿರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿಯ ಮಂಟೂರಿನಲ್ಲಿ ನಡೆದಿದೆ.

ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ನೂರಾರು ಜರಿಗೆ ನಿವೇಶನ ಹಂಚಿಕೆ ಹಾಗೂ ಹಕ್ಕು ಪತ್ರ ವಿತರಿಸುವ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವೇಶದಾರರಿಗೆ ಹಕ್ಕು ಪತ್ರ ವಿತರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಿದ್ದು, ವೇದಿಕೆಯ ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನ ಹಲವು ನಾಯಕರ ಬೃಹದಾಕಾರದ ಕಟೌಟ್ ಅಳವಡಿಸಲಾಗಿದೆ.

ವೇದಿಕೆಯ ಮುಂಭಾಗ ಅಳವಡಿಸಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರ ದೊಡ್ಡ ಕಟೌಟ್ ಏಕಾಏಕಿ ಕುಸಿದು ಬಿದ್ದಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular