HomeLatest NewsBIG NEWS: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮತ್ತೆ ಬಿಜೆಪಿ ಪಾಲು: ನೂತನ ಮೇಯರ್ ಆಗಿ ಜ್ಯೋತಿ...

BIG NEWS: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮತ್ತೆ ಬಿಜೆಪಿ ಪಾಲು: ನೂತನ ಮೇಯರ್ ಆಗಿ ಜ್ಯೋತಿ ಪಾಟೀಲ್ ಆಯ್ಕೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ನೂತನ ಮೇಯರ್ ಆಗಿ ಜ್ಯೋತಿ ಪಾಟೀಲ್ ಆಯ್ಕೆಯಾಗಿದ್ದಾರೆ.

ಹುಬ್ಬಳ್ಳಿ ಪಾಲಿಕೆ ಸಭಾಭವನದಲ್ಲಿ ನಡೆದ ಚುನಾವಣೆ ಮತ ಎಣಿಕೆ ನಡೆದಿದ್ದು, ಜ್ಯೋತಿ ಪಾಟೀಲ್ ಮೇಯರ್ ಆಗಿ ಹಾಗೂ ಸಂತೋಶ್ ಚೌವ್ಹಾಣ್ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಅಧಿಸೂಚನೆಗಳ ಪ್ರಕಾರ ಮೇಯರ್ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪ ಮೇಯರ್ ಸ್ಥಾನ ಹಿಂದುಳಿದ ವರ್ಗಕ್ಕೆ ಮೀಸಲಾಗಿತ್ತು. ಬಿಜೆಪಿಯ ಜ್ಯೋತಿಪಾಟೀಲ್ 47 ಮತಗಳ ಮೂಲಕ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ಸಂತೋಶ್ ಚೌವ್ಹಾಣ್ ಕೂಡ 47 ಮತಗಳ ಮೂಲಕ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೂಲಕ ಹುಬ್ಬಳ್ಳಿ-ಧಾರವಾಡ ಮೇಯರ್-ಉಪಮೇಯರ್ ಸ್ಥಾನ ಬಿಜೆಪಿ ಪಾಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular