HomeKarnatakaBIG NEWS: ಹುಬ್ಬಳ್ಳಿ-ಧಾರವಾಡ ನೂತನ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ನೇಮಕ

BIG NEWS: ಹುಬ್ಬಳ್ಳಿ-ಧಾರವಾಡ ನೂತನ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ನೇಮಕ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಕಾನೂನು ಹಾಗೂ ಸುವ್ಯವಸ್ಥೆ ನೂತನ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೆಶ ಹೊರಡಿಸಿದೆ.

ಕುಶಾಲ್ ಚೌಕ್ಸೆ 2018ರ ಬ್ಯಾಚಿನ ಕರ್ನಾಟಕ ಕೇಡರ್ ಅಧಿಕಾರಿಯಾಗಿದ್ದಾರೆ. ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ಜಂಟಿ ನಿರ್ದೇಶಕರಾಗಿದ್ದರು.

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಹಾಗೂ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ಬೆನ್ನಲ್ಲೇ ಹುಬ್ಬಳ್ಳಿ-ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ವೈಫಲ್ಯ ಹಿನ್ನೆಲೆಯಲ್ಲಿ ಡಿಸಿಪಿ ಎಂ. ರಾಜೀವ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ನೂತನ ಡಿಸಿಪಿಯಾಗಿ ಕುಶಾಲ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular