ಕ್ರಿಕೆಟ್ ಬೆಟ್ಟಿಂಗ್; 42 ಆರೋಪಿಗಳು ಅರೆಸ್ಟ್

ಹುಬ್ಬಳ್ಳಿ: ವಿಶ್ವಕಪ್ ಕ್ರೇಜ್ ಜೋರಾಗಿರುವಾಗಲೇ ಇನ್ನೊಂದೆಡೆ ಕ್ರಿಕೆಟ್ ಬೆಟ್ಟಿಂಗ್ ಭರಾಟೆಯೂ ಹೆಚ್ಚಾಗಿದೆ. ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ 42 ಆರೋಪಿಗಳನ್ನು ಹುಬ್ಬಳ್ಳಿ-ಧಾರವಾಡ ಪೊಲೀಸರು ಬಂಧಿಸಿದ್ದಾರೆ.

ಕಳೆದ 15 ದಿನಗಳಿಂದ ಹುಬ್ಬಳ್ಳಿ-ಧಾರವಾಡದಲ್ಲಿ 29 ಬೆಟ್ಟಿಂಗ್ ಪ್ರಕರಣಗಳು ದಾಖಲಾಗಿದ್ದು, ಈವರೆಗೆ 42 ಆರೋಪಿಗಳನ್ನು ಬಂಧಿಸಲಾಗಿದೆ. ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷ್ನರ್ ರೇಣುಕಾ ಸುಕುಮಾರ್ ಮಾಹಿತಿ ನೀಡಿದ್ದು, ಬೆಟ್ಟಿಂಗ್ ನಲ್ಲಿ ತೊಡಗಿದ್ದ 42 ಜನರನ್ನು ಬಂಧಿಸಲಾಗಿದೆ. ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾರತ ಸೆಮಿಫೈನಲ್ ತಲುಪಿದ್ದು, ಬೆಟ್ಟಿಂಗ್ ಬಗ್ಗೆ ಎಚ್ಚರ ವಹಿಸಲಾಗಿದೆ.

ಹುಬ್ಬಳ್ಳಿ-ಧರವಾಡ ವ್ಯಾಪ್ತಿಯಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ಸೈಬರ್ ಬೇಸ್, ಆಪ್ ಗಳ ಮೇಲೂ ಕಟ್ಟೆಚ್ಚರ ವಹಿಸಲಾಗಿದೆ. ಜೂಜಾಟ ಪ್ರಕರಣಗಳ ಮೇಲೂ ನಿಗಾ ವಹಿಸಲಾಗಿದ್ದು, ಈಗಾಗಲೇ 731 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read