ಆಸ್ಪತ್ರೆಯಲ್ಲಿ ಗಣೇಶ ಮೂರ್ತಿ ಕೂರಿಸಿದ್ದ ಸಿಬ್ಬಂದಿಗೆ ನೋಟಿಸ್ ಜಾರಿ; ವೈದ್ಯಕೀಯ ಅಧೀಕ್ಷಕನಿಂದ ವಿವಾದಾತ್ಮಕ ನಡೆ

ಹುಬ್ಬಳ್ಳಿ: ಆಸ್ಪತ್ರೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದಕ್ಕೆ ಸಿಬ್ಬಂದಿಗಳಿಗೆ ನೋಟಿಸ್ ಜಾರಿ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಇಎಸ್ಐ ಆಸ್ಪತೆಯಲ್ಲಿ ಗಣೇಶ ಮೂರ್ತಿಯನ್ನು ನೌಕರರು ಪ್ರತಿಷ್ಠಾಪಿಸಿದ್ದರು. ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದ ಸಿಬ್ಬಂದಿಗಳಿಗೆ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.

ಕಳೆದ ಮೂರು ವರ್ಷಗಳಿಂದ ಹುಬ್ಬಳ್ಳಿಯ ಇಎಸ್ಐ ಆಸ್ಪತ್ರೆಯಲ್ಲಿ ಗಣೇಶ ಮೂರ್ತಿ ಕೂರಿಸಲು ಅವಕಾಶ ನೀಡಲಾಗಿತ್ತು. ಆದರೆ ಈ ವರ್ಷ ಅವಕಾಶ ನೀಡಿರಲಿಲ್ಲ. ಆದಾಗ್ಯೂ ಸಿಬ್ಬಂದಿಗಳು ಆಸ್ಪತ್ರೆ ಆವರಣದಲ್ಲಿ ಗಣೇಶ ಮೂರ್ತಿ ಕೂರಿಸಿದ್ದರು. ಇದೀಗ ಆಸ್ಪತ್ರೆ ಮುಖ್ಯಸ್ಥ ಯೂನಿಸ್ ನಜ್ಮಿ ಸಿಬ್ಬಂದಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ವೈದ್ಯಕೀಯ ಅಧೀಕ್ಷನ ನಜ್ಮಿ ನಡೆ ಹಿಂದೂ ಸಂಘಟನೆ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ ಇದು ಆದಳಿತಾತ್ಮಕ ವಿಷಯ. ಮೇಲಿನ ಅಧಿಕಾರಿಗಳ ಗಮನಕ್ಕೆ ತಂದೇ ಸಿಬ್ಬಂದಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಮಾಡಲಾಗಿದೆ ಎಂದು ನಜ್ಮಿ ಸಮರ್ಥಿಸಿಕೊಂಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read