ಹುಬ್ಬಳ್ಳಿ: ಬೆಂಗಳೂರಿನಲ್ಲಿ ಹಾಡಹಗಲೇ ನಡೆದಿದ್ದ 7.11 ಕೋಟಿ ದರೋಡೆ ಪ್ರಕರಣದ ಬೆನ್ನಲ್ಲೇ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಇಡಿ ಅಧಿಕಾರಿಗಳು ನಿಮ್ಮ ಅಂಗಡಿ ಮೇಲೆ ರೇಡ್ ಆಗಿದೆ ಎಂದು ಬೆದರಿಸಿ 3 ಕೋಟಿಗೂ ಅಧಿಕ ಚಿನ್ನಾಭರಣ, ಹಣ ಲೂಟಿ ಮಾಡಿ ಕಳ್ಳರು ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ನೀಲಿಜನ್ ರಸ್ತೆಯಲ್ಲಿರುವ ಚಿನಾಭರಣ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಕೇರಳ ಮೂಲದ ಚಿನ್ನದ ವ್ಯಾಪಾರಿ ಎಂ.ಆರ್.ಸುದೀನ್ ಎಂಬುವವರಿಗೆ ವಂಚಿಸಿ ನಕಲಿ ಇಡಿ ಅಧಿಕಾರಿಗಳು ಚಿನ್ನಾಭರಣ, ಹಣದ ಜೊತೆಗೆ ಪರಾರಿಯಾಗಿದ್ದಾರೆ.
ಕಳೆದ ಗುರುವಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಡಿ ಅಧಿಕಾರಿಗಳು ಎಂದು ಬಂದಿದ್ದ ಐವರ ಗ್ಯಾಂಗ್, ವಿಚಾರಣೆ ನೆಪದಲ್ಲಿ 2 ಕೆಜಿ 942 ಗ್ರಾಂ ಚಿನ್ನಾಭರಣ, 2 ಲಕ್ಷ ನಗದು ದೋಚಿ ವಂಚಕರು ಎಸ್ಕೇಪ್ ಆಗಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.
