HomeKarnatakaSHOCKING NEWS: ಮನುಷ್ಯತ್ವವನ್ನು ಮರೆತ ಮಗ: ಕುಡಿದ ಮತ್ತಿನಲ್ಲಿ ತಂದೆಯನ್ನೇ ಹೊಡೆದು ಕೊಂದ ಪುತ್ರ

SHOCKING NEWS: ಮನುಷ್ಯತ್ವವನ್ನು ಮರೆತ ಮಗ: ಕುಡಿದ ಮತ್ತಿನಲ್ಲಿ ತಂದೆಯನ್ನೇ ಹೊಡೆದು ಕೊಂದ ಪುತ್ರ

ಹುಬ್ಬಳ್ಳಿ: ಶಿವಮೊಗ್ಗದಲ್ಲಿ ಮಗನೊಬ್ಬ ತನ್ನ ತಂದೆಯನ್ನೇ ಸುತ್ತಿಗೆಯಲ್ಲಿ ಹೊಡೆದು ಕೊಂದಿರುವ ಘಟನೆ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿಯೂ ಇಂತದ್ದೇ ಘೋರ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಮಗ ಮಹಾಶಯ ತನ್ನ ತಂದೆಯನ್ನೇ ಕೊಲೆ ಮಾಡಿ ಪತ್ನಿ ಜೊತೆ ಪರಾರಿಯಾಗಿದ್ದಾನೆ.

ಹಳೇ ಹುಬ್ಬಳ್ಳಿಯಲ್ಲಿ ಈ ಘಟನೆ ನಡೆದಿದೆ. ತಂದೆ ಮಗನ ನಡುವೆ ಆಸ್ತಿ ವಿಚಾರವಾಗಿ ನವೆಂಬರ್ 19ರಂದು ಗಲಾಟೆಯಾಗಿತ್ತಂತೆ. ಇಂದು ಕುಡಿದು ಬಂದ ಮಗ ಏಕಾಏಕಿ ತಂದೆಯನ್ನೇ ಮನಬಂದಂತೆ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ತಂದೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ನಾಗರಾಜ್ (77) ಕೊಲೆಯಾಗಿರುವ ತಂದೆ. ಅಣ್ಣಪ್ಪ ತಂದೆಯನ್ನೇ ಕೊಂದ ಮಗ. ಕಂಠಪೂರ್ತಿ ಕುಡಿದು ಬಂದಿದ್ದ ಅಣ್ಣಪ್ಪ ತಂದೆ ಮೇಲೆ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ನಾಗರಾಜ್ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಾಗರಾಜ್ ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಗ ಅಣ್ಣಪ್ಪ ವಿರುದ್ಧ ಕೊಲೆ ಕೇಸ್ ದಾಖಲಾಗಿದೆ. ಘಟನೆ ಬಳಿಕ ಪಣ್ಣಪ್ಪ ಪತ್ನಿ ಸಮೇತ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular