ಫ್ಲೈ ಓವರ್ ಕಾಮಗಾರಿ ವೇಳೆ ರಾಡ್ ಬಿದ್ದು ASI ಸ್ಥಿತಿ ಗಂಭೀರ; ಝಂಡು ಕನ್ ಸ್ಟ್ರಕ್ಷನ್ ಎಂಡಿ ಸೇರಿದಂತೆ 16 ಜನರ ವಿರುದ್ಧ ಕೇಸ್ ದಾಖಲು

ಹುಬ್ಬಳ್ಳಿ: ಫ್ಲೈಓವರ್ ಕಾಮಗಾರಿ ವೇಳೆ ಕಬ್ಬಿಣದ ರಾಡ್ ಬಿದ್ದು ಎಎಸ್ಐ ಗಂಭೀರವಾಗಿ ಗಾಯಗೊಂಡು ಆಸ್ಪತೆಗೆ ದಾಖಲಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆ ಎಎಸ್ಐ ನಾಭಿರಾಜ್ ದಯಣ್ಣವರ (59) ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುಬ್ಬಳ್ಳಿಯ ಕೋರ್ಟ್ ಸರ್ಕಲ್ ಬಳಿ ಫ್ಲೈಓವರ್ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಎಎಸ್ಐ ನಾಭಿರಾಜ್ ಕರ್ತವ್ಯದ ಮೇಲೆ ಪೊಲೀಸ್ ಠಾಣೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅವರ ತಲೆಯ ಮೇಲೆ ಕಬ್ಬಿಣದ ರಾಡ್ ಬಿದ್ದಿದೆ. ತೀವ್ರ ರಕ್ತಸ್ರಾವ ಉಂಟಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವೈಜ್ಞಾನಿಕವಾಗಿ ಹಾಡು ಹಗಲೇ ಜನರು ಓಡಾಡುತ್ತಿದ್ದ ಸಂದರ್ಭದಲ್ಲಿಯೇ ಫ್ಲೈಓವರ್ ಕಾಮಗಾರಿ ಕೈಗೊಂಡಿದ್ದು, ಅವಘಡಕ್ಕೆ ಕಾರಣ ಎಂಬ ಆಕ್ರೋಶ ವ್ಯಕ್ತವಾಗಿದೆ. ಇದೀಗ ಪ್ರಕರಣ ದ್ಸಂಬಂಧ ಕಾಮಗಾರಿ ನಡೆಸುತ್ತಿದ್ದ ಝಂಡು ಕನ್ ಸ್ಟ್ರಕ್ಷನ್ ಎಂಡಿ ಸೇರಿದಂತೆ 16 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read