HomeLatest NewsBIG NEWS: ಬಿಜೆಪಿ ಕಾರ್ಯಕರ್ತೆ ಬಂಧನ, ವಿವಸ್ತ್ರಗೊಳಿಸಿ ಹಲ್ಲೆ ಆರೋಪ ಪ್ರಕರಣ: ಇನ್ಸ್ ಪೆಕ್ಟರ್ ವರ್ಗಾವಣೆ

BIG NEWS: ಬಿಜೆಪಿ ಕಾರ್ಯಕರ್ತೆ ಬಂಧನ, ವಿವಸ್ತ್ರಗೊಳಿಸಿ ಹಲ್ಲೆ ಆರೋಪ ಪ್ರಕರಣ: ಇನ್ಸ್ ಪೆಕ್ಟರ್ ವರ್ಗಾವಣೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡೆ ಬಂಧನ, ವಿವಸ್ತ್ರಗೊಳಿಸಿ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್ ಪೆಕ್ಟರ್ ಓರ್ವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಪೊಲೀಸರ ವರ್ತನೆ ಖಂಡಿಸಿ ಪ್ರಕರಣ ಸಂಬಂಧ ಬಿಜೆಪಿ ಕಾರ್ಯಕರ್ತರು ಹುಬ್ಬಳ್ಳಿಯ ಕೇಶ್ವಾಪುರ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಇನ್ನೊಂದೆಡೆ ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ ಮಾಡಿ ಕಮಿಷ್ನರ್ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಈ ನಡುವೆ ಕೇಶ್ವಾಪುರ ಠಾಣೆ ಇನ್ಸ್ ಪೆಕ್ಟರ್ ನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಎಸ್.ಕೆ.ಹಟ್ಟಿ ವರ್ಗಾವಣೆಯಾಗಿರುವ ಕೇಶ್ವಾಪುರ ಠಾಣೆ ಇನ್ಸ್ ಪೆಕ್ಟರ್. ಘಂಟಿಕೇರಿ ಠಾಣೆಯ ಇನ್ಸ್ ಪೆಕ್ಟರ್ ಜಾದವ್ ಅವರನ್ನು ಕೇಶ್ವಾಪುರ ಠಾಣೆ ಹೆಚ್ಚುವರಿ ಪ್ರಭಾರಿಯನ್ನಾಗಿ ನೇಮಕ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular