ನರ್ಸ್ ಗಳನ್ನು ಗುರಿಯಾಗಿಸಿ ವೈದ್ಯಕೀಯ ವಿದ್ಯಾರ್ಥಿಗಳಿಂದ ರೀಲ್ಸ್; ಕಿಮ್ಸ್ ಆಡಳಿತ ಮಂಡಳಿ ವಿರುದ್ಧ ಆಕ್ರೋಶ

ಹುಬ್ಬಳ್ಳಿ; ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು, ಯುವಕರು ರೀಲ್ಸ್ ಮಾಡಲು ಹೋಗಿ ಏನೆಲ್ಲ ಅವಾಂತರಗಳನ್ನು ಮಾಡುತ್ತಿದ್ದಾರೆ ಎಂಬುದು ಗೊತ್ತಿರುವ ವಿಚಾರ. ಇದೀಗ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿಗಳು ರೀಲ್ಸ್ ಹುಚ್ಚಾಟಕ್ಕೆ ನರ್ಸ್ ಗಳನ್ನು ಬಳಸಿಕೊಳ್ಳುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಕಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳು ನರ್ಸ್ ಗಳನ್ನು ಗುರಿಯಾಗಿಸಿಕೊಂಡು ಚಲನಚಿತ್ರದ ಹಾಡುಗಳಿಗೆ ರೀಲ್ಸ್ ಮಾಡುವ ಮೂಲಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೀಲ್ಸ್ ವಿಡಿಯೋಗಳನ್ನು ಇನ್ ಸ್ಟಾಗ್ರಾಂ ನಲ್ಲಿ ಹಾಕಿದ್ದು, ವಿದ್ಯಾರ್ಥಿಗಳ ಹುಚ್ಚಾಟಕ್ಕೆ ಕರ್ನಾಟಕ ರಾಜ್ಯ ನರ್ಸ್ ಅಸೋಸಿಯೇಷನ್ ಆಕ್ರೋಶ ವ್ಯಕ್ತಪಡಿಸಿದೆ.

‘ನಂಬಬೇಡ ನಂಬಬೇಡ ಹುಡುಗಿಯರನ್ನು ನಂಬ ಬೇಡ’ ಎಂಬ ಹಾಡಿನ ಸಾಲಿಗೆ ‘ನಂಬಬೇಡ, ನಂಬಬೆಡ ನರ್ಸ್ ಗಳನ್ನು ನಂಬಬೇಡ’ ಎಂದು ಹಾಡಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಮಹೇಶ್ ರೆಡ್ಡಿ ಎಂಬಾತನ ಅಕೌಂಟ್ ನಿಂದ ಪೋಸ್ಟ್ ಆಗಿದೆ. ಸಧ್ಯ ವಿಡಿಯೋ ಭಾರಿ ವೈರಲ್ ಆಗಿದ್ದು, ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನರ್ಸ್ ಅಸೋಷಿಯೇಷನ್ ಹಾಗೂ ಧಾರವಾಡ ಜಿಲ್ಲಾ ಶುಶ್ರೂಷಕರ ಸಂಘ ಒತ್ತಾಯಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read