ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಪ್ರಕರಣಗಳು ದಿಬದಿಂದ ದಿನಕ್ಕೆ ಹೆಚ್ಚುತ್ತಿವೆ. ಹುಬ್ಬಳ್ಳಿ ಮಿನಿ ಮುಂಬೈನಂತಾಗಿದೆ. ದಿನಕ್ಕೊಂದು ಅಪರಾಧ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಪುಡಿರೌಡಿಗಳ ನಡುವೆ ಹಾಡಹಗಲೇ ಮಾರಾಮಾರಿ ನಡೆದಿದೆ.
ಹುಬ್ಬಳ್ಳಿತ ಕಮರಿಪೇಟೆ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಎರಡು ಪುಡಿರೌಡಿಗಳ ಗುಂಪು ತಲ್ವಾರ್ ಹಿಡಿದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹೊಡೆದಾಟದಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
ಗಾಯಾಳುವನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

