ಹುಬ್ಬಳ್ಳಿ: ಬೆಂಗಳೂರಿನಲ್ಲಿ ವೃದ್ಧೆಯನ್ನು ಹತ್ಯೆಗೈದು ಚಿನ್ನಾಭರಣ ದೋಚಿರುವ ಘಟನೆ ಬೆನ್ನಲ್ಲೇ ಇದೀಗ ಹುಬ್ಬಳ್ಳಿಯಲ್ಲಿಯೂ ೭೫ ವರ್ಷದ ವೃದ್ಧೆಯನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಂದಿರುವ ಘಟನೆ ನಡೆದಿದೆ.
ಹುಬ್ಬಳ್ಳಿಯ ಬ್ರಹ್ಮಗಿರಿ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. 75 ವರ್ಷದ ನಿಂಗವ್ವ ಕೊಲೆಯಾದ ಮಹಿಳೆ. ಆಸ್ತಿ ವಿಚಾರವಾಗಿ ನಿಂಗವ್ವ ಅವರನ್ನು ಕೊಲೆಗೈದು ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
