ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾನೂನು ವಿವಿ ಇಂಜಿನಿಯರ್ ವಿಠಲ ರಾಠೋಡ್ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ದಂಪತಿ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿಯ ನವನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಮೇಘವ್ ಹಾಗೂ ಆತನ ಪತ್ನಿ ವಿಮಲಾ ಹಾಗೂ ಭಗವಾನ್ ಎಂದು ಗುರುತಿಸಲಾಗಿದೆ.
ಕಾನೂನು ವಿವಿ ಇಂಜಿನಿಯರ್ ವಿಠಲ ರಾಠೋಡ್ ನನ್ನು ನಿರ್ಮಾಣ ಹಂತದ ಕಟ್ಟಡದ ಮೇಲಿನಿಂದ ತಳ್ಳಿ ಹತ್ಯೆ ಮಾಡಿದ್ದರು. ಆದರೆ ವಿದ್ಯಾರ್ಥಿ ಕಟ್ಟಡದ ಮೇಲಿನಿಂದ ಆಕಸ್ನಿಕವಾಗಿ ಬಿದ್ದು ಮೃತಪಟ್ಟಿದ್ದಾನೆ ಎಂದು ಆರೋಪಿಗಳು ಬಿಂಬಿಸಿದ್ದರು. ವಿಚಾರಣೆ ವೇಳೆ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ನವನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

