HomeCrimeಹುಬ್ಬಳ್ಳಿಯಲ್ಲಿ ಮತ್ತೊಂದು ಘೋರ ಕೃತ್ಯ: ದೇವಸ್ಥಾನದ ಅರ್ಚಕರ ಬರ್ಬರ ಹತ್ಯೆ

ಹುಬ್ಬಳ್ಳಿಯಲ್ಲಿ ಮತ್ತೊಂದು ಘೋರ ಕೃತ್ಯ: ದೇವಸ್ಥಾನದ ಅರ್ಚಕರ ಬರ್ಬರ ಹತ್ಯೆ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ದೇವಸ್ಥಾನದ ಅರ್ಚಕರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಹುಬ್ಬಳ್ಳಿಯ ಈಶ್ವರ ನಗರದಲ್ಲಿರುವ ವೈಷ್ಣವಿ ದೇವಸ್ಥಾನದ ಅರ್ಚಕ ದೇವವಪ್ಪಜ್ಜ ಕೊಲೆಯಾದವರು. ಅರ್ಚಕರನ್ನು ಚಾಕುವಿನಿಂದ ಇರಿದು ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಕಳೆದ ಒಂದು ವರ್ಷದ ಹಿಂದೆ ಇದೇ ಅರ್ಚಕರ ಮೇಲೆ ದಾಳಿ ನಡೆದಿತ್ತು. ಆದರೆ ಪ್ರಾಣಾಪಾಯದಿಂದ ಪಾರಾಗಿದ್ದರು. ಇದೀಗ ದುಷ್ಕರ್ಮಿಗಳು ಅರ್ಚಕರನ್ನು ಕೊಲೆಗೈದು ಪರಾರಿಯಾಗಿದ್ದಾರೆ. ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular