HomeLatest NewsBIG NEWS: ಹುಬ್ಬಳ್ಳಿ ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳನ್ನು ಹಿಡಿದು ಥಳಿಸಿದ ನಾಲ್ವರ ವಿರುದ್ಧವೂ ಕೇಸ್...

BIG NEWS: ಹುಬ್ಬಳ್ಳಿ ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳನ್ನು ಹಿಡಿದು ಥಳಿಸಿದ ನಾಲ್ವರ ವಿರುದ್ಧವೂ ಕೇಸ್ ದಾಖಲು

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ವಿಡಿಯೋ ಹರಿಬಿಟ್ಟ ಘಟನೆ ನಡೆದಿದ್ದು, ಪ್ರಕರಣದ ಆರೋಪಿಗಳನ್ನು ಹಿಡಿದು ಥಳಿಸಿದವರ ಮೇಲೇಯೇ ಇದೀಗ ಕೇಸ್ ದಾಖಲಾಗಿದೆ.

ಮಹಿಳೆಯನ್ನು ಆಟೋದಲ್ಲಿ ಕರೆದೊಯ್ದಿದ್ದ ಇಬ್ಬರು ಕಾಮುಕರು ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರವೆಸಗಿ, ಕೃತ್ಯದ ವಿಡಿಯೋ ಮಾಡಿಕೊಂಡು ಸೋಷಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿರುವ ಘಟನೆ ಹಳೇ ಹುಬ್ಬಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜನವರಿ 9ರಂದು ಈ ಘಟನೆ ನಡೆದಿದ್ದು, ಜನವರಿ 10 ರಂದು ಸಂತ್ರಸ್ತೆ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯರು ಆರೋಪಿಗಳಿಬ್ಬರನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಮರಕ್ಕೆ ಕಟ್ಟಿಹಾಕಿದ್ದಾರೆ. ಬಳಿಕ ತಲೆಬೋಳಿಸಿದ್ದಾರೆ. ಆರೋಪಿಗಳನ್ನು ಥಳಿದ ಕಾರಣಕ್ಕೆ ನಾಲ್ವರ ವಿರುದ್ಧ ಕೇಸ್ ದಾಖಲಾಗಿದೆ.

ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳಾದ ಶಿವಾನಂದ್ ಹಾಗೂ ಗಣೇಶ್ ಎಂಬುವವರನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular