BIG NEWS: ಜಿಲ್ಲಾ ಉಸ್ತುವಾರಿ ಸಚಿವರ ಹೆಸರಲ್ಲಿ ಬೆದರಿಕೆ ಹಾಕಿ ಹಣ ವಸೂಲಿ; ಕರವೇ ಜಿಲ್ಲಾಧ್ಯಕ್ಷನ ವಿರುದ್ಧ FIR ದಾಖಲು

ಹುಬ್ಬಳ್ಳಿ: ಸಚಿವರ ಹೆಸರಲ್ಲಿ ಬೆದರಿಕೆ ಕರೆ ಆರೋಪದ ಹಿನ್ನೆಲೆಯಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಸೇರಿದಂತೆ 8 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಜಿಲ್ಲಾಧ್ಯಕ್ಷ ಮಂಜುನಾಥ್ ಲೂತಿಮಠ ಸೇರಿದಂತೆ 8 ಜನರ ವಿರುದ್ಧ ಹುಬ್ಬಳ್ಳಿ ಶಹಪುರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಕರ್ನಾಟಕ ರಾಜ್ಯೋತ್ಸವ ಆಚರಣೆಗೆ 2 ಲಕ್ಷ ರೂಪಾಯಿ ನೀಡಬೇಕು. ಇಲ್ಲದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಅಂಗಡಿ ನಡೆಸದಂತೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಈ ಬಗ್ಗೆ ಉದ್ಯಮಿ ವಿಜಯ್ ಅಳಗುಂದಗಿ ಎಂಬುವವರು ಪ್ರಕರಣ ದಾಖಲಿಸಿದ್ದಾರೆ.

ಹುಬ್ಬಳ್ಳಿಯ ಉಳ್ಳಾಗಡ್ಡಿ ಓಣಿ, ಬಟರ್ ಮಾರ್ಕೆಟ್,ಜವಳಿ ಸಾಲ ವ್ಯಾಪಾರಸ್ಥರಿಗೆ ಬೆದರಿಕೆ ಹಾಕಿ 2 ಲಕ್ಷ ರೂಪಾಯಿ ವಸೂಲಿ ಮಾಡಿದ್ದಾರೆ. ಅಲ್ಲದೇ ಪ್ರತಿ ತಿಂಗಳು ನೀಡಬೇಕಾದ 1.70 ಲಕ್ಷ ಹಣವನ್ನೂ ಕೊಡಬೇಕು ಇಲ್ಲವಾದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಂಗಡಿ ನಡೆಸದಂತೆ ಮಾಡುತ್ತೇನೆ ಎಂದು ಧಮ್ಕಿ ಹಾಕಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read