HomeKarnatakaBIG NEWS: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಹಿಂದೂ ಯುವತಿಯೊಂದಿಗೆ ವಿವಾಹಿತ ಮುಸ್ಲಿಂ ವ್ಯಕ್ತಿ ಎಸ್ಕೇಪ್

BIG NEWS: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಹಿಂದೂ ಯುವತಿಯೊಂದಿಗೆ ವಿವಾಹಿತ ಮುಸ್ಲಿಂ ವ್ಯಕ್ತಿ ಎಸ್ಕೇಪ್

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸಾಲು ಸಾಲು ಲವ್ ಜಿಹಾದ್ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ವಿವಾಹಿತ ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ಯುವತಿಯೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.

ಧಾರವಾಡ ಜಿಲ್ಲೆಯ ಕೆಲಗೇರಿಯ ಹಿಂದೂ ಯುವತಿಯನ್ನು ವಿವಾಹಿತ ಮುಸ್ಲಿಂ ವ್ಯಕ್ತಿ ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ಮನೆ ಖರೀದಿಗೆ ನೀಡಿದ್ದ 10 ಲಕ್ಷ ಹಣವನ್ನೂ ವಂಚಿಸಿದ್ದಾನೆ. ಎರಡು ವರ್ಷಗಳಿಂದ ಮಗಳು ನಾಪತ್ತೆಯಾಗಿದ್ದು, ಈ ಬಗ್ಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ನಾಪತ್ತೆಯಾಗಿರುವ ಯುವತಿಯ ತಾಯಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುವತಿಯ ತಾಯಿ, ತನ್ನ ಮಗಳನ್ನು ಮುಸ್ಲಿಂ ಸಮುದಾಯದ ವಿವಾಹಿತ ವ್ಯಕ್ತಿ ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ಜೊತಗೆ ಮನೆ ಖರೀದಿಸಲು ನೀಡಿದ್ದ ಹತ್ತು ಲಕ್ಷ ಹಣ ಕೂಡಾ ತೆಗೆದುಕೊಂಡು ಹೋಗಿದ್ದಾನೆ. ಇದೀಗ ಹಣವೂ ಇಲ್ಲ, ಮಗಳೂ ಇಲ್ಲ ಎಂಬಂತಾಗಿದೆ. ದಯವಿಟ್ಟು ಮಗಳನ್ನು ಹುಡುಕಿ ಕೊಡಿ ಎಂದು ಮನವಿ ಮಾಡಿದ್ದಾರೆ. ಕಳೆದ ಎರಡು ವರ್ಷಗಳಿಂದ ಮಗಳಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರು ನೀಡಿದ್ದಾರೆ

ಕೆಲಗೇರಿಯ ನಿವಾಸಿ ಇಪ್ಪತ್ತೆರಡು ವರ್ಷದ ತಂಗೆಮ್ಮಾ ಎಂಬ ಯುವತಿ ಮನೆ ಎದುರಿನ ನಿವಾಸಿ ಕಾರು ಚಾಲಕನಾಗಿದ್ದ ಮುಸ್ಲಿಂ ವ್ಯಕ್ತಿಯ ಜೊತೆಗೆ ಓಡಿ ಹೋಗಿದ್ದು, ಈ ಬಗ್ಗೆ ಆಕೆಯ ತಾಯಿ ಮಂಜುಳಾ ಅವರೇ ಮಾಹಿತಿ ನೀಡಿದ್ದಾರೆ. ತಮ್ಮ ಮಗಳಿಗೆ ಪರಿಚಿತ ಯುವಕನ ಜೊತೆ ವಿವಾಹವಾಗಿತ್ತು. ಆದ್ರೆ ಮಗಳು ನಮ್ಮ ಜೊತೆಯೇ ಇದ್ದಳು. ಆಕೆಯ ಪತಿ ಆಗಾಗ ಬಂದು ಹೋಗುತ್ತಿದ್ದ. ಧಾರವಾಡದ ಕೆಲಗೇರಿಯಲ್ಲಿ ಬಾಡಿಗೆ ಮನೆಯಲ್ಲಿದ್ದಾಗ, ತಮಗೆ ವಕೀಲರೊಬ್ಬರು ಪರಿಚಯವಿದ್ದರು. ಅವರ ಕಾರ್ ಡ್ರೈವರ್ ಆಗಿ ಮುನ್ನಾ ಎಂಬಾತ ಕೆಲಸ ಮಾಡ್ತಿದ್ದ. ಆಗ ನಾವು ನಮಗೆ ಸ್ವಂತದೊಂದು ಮನೆ ಮಾಡಬೇಕು. ಹೀಗಾಗಿ ಮನೆ ಹುಡುಕಿ ಕೊಡಿ ಎಂದು ಮುನ್ನಾ ಮತ್ತು ವಕೀಲರಿಗೆ ಹತ್ತು ಲಕ್ಷ ಹಣ ನೀಡಿದ್ದೆವು. ಆ ಬಳಿಕ ವಕೀಲರು ಮತ್ತು ಮುನ್ನಾ ಆಗಾಗ ಮನೆಗೆ ಬಂದು ಹೋಗಿ ಮಾಡುತ್ತಿದ್ದರು.

2023ರಲ್ಲಿ ನಾವು ಮನೆಯಲ್ಲಿ ಇಲ್ಲದ ಸಂದರ್ಭ ಮುನ್ನಾ ತಮ್ಮ ಮಗಳನ್ನು ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಧಾರವಾಡದ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೆವು. ಆಗ ಪೊಲೀಸರು ಮುನ್ನಾ ವಿರುದ್ದ ದೂರು ದಾಖಲಿಸಿಕೊಳ್ಳದೇ ಕೇವಲ ಮಿಸ್ಸಿಂಗ್ ಕಂಪ್ಲೇಟ್ ದಾಖಲಿಸಿಕೊಂಡಿದ್ದರು. ಈವರೆಗೂ ಪೊಲೀಸರು ಮುನ್ನಾ ಮತ್ತು ತಮ್ಮ ಮಗಳು ಎಲ್ಲಿದ್ದಾರೆ ಎಂದು ಹುಡುಕಿ ಕೊಟ್ಟಿಲ್ಲ ಎಂದು ಆರೋಪಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular