HomeLive Newsಪರಿಹಾರ ನೀಡದ ಹಿನ್ನೆಲೆ: ಹುಬ್ಬಳ್ಳಿ ರೈಲ್ವೆ ಇಲಾಖೆಯ ಡೆಪ್ಯೂಟಿ ಚೀಫ್ ಎಂಜಿನಿಯರ್ ಕಚೇರಿ ಜಪ್ತಿ

ಪರಿಹಾರ ನೀಡದ ಹಿನ್ನೆಲೆ: ಹುಬ್ಬಳ್ಳಿ ರೈಲ್ವೆ ಇಲಾಖೆಯ ಡೆಪ್ಯೂಟಿ ಚೀಫ್ ಎಂಜಿನಿಯರ್ ಕಚೇರಿ ಜಪ್ತಿ

ಹುಬ್ಬಳ್ಳಿ: ರೈತರಿಗೆ ಭೂ ಪರಿಹಾರ ನೀಡದ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಹುಬ್ಬಳ್ಳಿ ನಗರದಲ್ಲಿರುವ ರೈಲ್ವೆ ಇಲಾಖೆಯ ಡೆಪ್ಯೂಟಿ ಚೀಫ್​ ಎಂಜಿನಿಯರ್ ಕಚೇರಿಯಲ್ಲಿನ ವಸ್ತುಗಳನ್ನು ಜಪ್ತಿ ಮಾಡಿರುವ ಘಟನೆ ನಡೆದಿದೆ.

ನೈರುತ್ಯ ರೈಲ್ವೆ ವಿಭಾಗಕ್ಕೆ ಸೇರಿದ ಕಚೇರಿಯಲ್ಲಿನ ಟೇಬಲ್, ಕಂಪ್ಯೂಟರ್, ಪ್ರಿಂಟರ್, ಕುರ್ಚಿ ಸೇರಿ ಅನೇಕ ವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ. 2017ರಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ರೈಲು ನಿಲ್ದಾಣಕ್ಕೆಂದು ಇಲಾಖೆ 16 ರೈತರಿಂದ ‌ 12.5 ಎಕರೆ ಭೂಮಿಯನ್ನು ನೈರುತ್ವ ರೈಲ್ವೆ ಸ್ವಾಧೀನಪಡಿಸಿಕೊಂಡಿತ್ತು. ಸ್ವಾಧಿನ ಪಡಿಸಿಕೊಳ್ಳಲಾದ ಜಾಗ ಕೃಷಿ ಜಮೀನಾಗಿದ್ದ ಹಿನ್ನೆಲೆ ಒಂದು ಎಕರೆಗೆ 18 ಲಕ್ಷ ಪರಿಹಾರ ನಿಗದಿ ಮಾಡಿ ನೀಡಲಾಗಿತ್ತು. ಆದರೆ ನೀಡಿರುವ ಪರಿಹಾರ ಕಡಿಮೆ ಆಗಿದೆ ಎಂದು ರೈತರು ಕೋರ್ಟ್​​ ಮೊರೆ ಹೋಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭೂಸ್ವಾಧೀನ ಸಂಬಂಧ ವಿಚಾರಣೆ ನಡೆಸಿದ್ದ ಕೊಪ್ಪಳ ಜಿಲ್ಲಾ ನ್ಯಾಯಾಲಯ ಪ್ರತಿ ಚದರ್ ಅಡಿಗೆ 800 ರೂಪಾಯಿ ನಿಗದಿ ಮಾಡಿ ಮಾರ್ಚ್​​ 31, 2023ರಲ್ಲಿ ಆದೇಶ ಮಾಡಿತ್ತು. ನಂತರ ಪ್ರಕರಣವನ್ನು ಹುಬ್ಬಳ್ಳಿ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು.

ಈ ನಡುವೆ ಕೊಪ್ಪಳ ಜಿಲ್ಲಾ ನ್ಯಾಯಲಯದ ಆದೇಶದ ವಿರುದ್ಧ ಧಾರವಾಡ ಹೈಕೋರ್ಟ್ ಪೀಠಕ್ಕೆ ನೈರುತ್ಯ ರೈಲ್ವೆ ಇಲಾಖೆ ಮೇಲ್ಮನವಿ ಸಲ್ಲಿಸಿತ್ತು. ಶೇಕಡಾ 50ರಷ್ಟು ಹಣ ಪಾವತಿ ಮಾಡುವಂತೆ ನ್ಯಾಯಾಲಯ ಮಧ್ಯಂತರ ಆದೇಶ ನೀಡಿತ್ತು. ಆದರೆ ರೈಲ್ವೆ ಇಲಾಖೆ ಈ ಆದೇಶವನ್ನು ಕೂಡ ಪಾಲಿಸಿರಲಿಲ್ಲ. ಹೀಗಾಗಿ ಹುಬ್ಬಳ್ಳಿ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಜಪ್ತಿ ಕಾರ್ಯ ನಡೆದಿದೆ. ಒಟ್ಟು 9 ಪ್ರಕರಣಗಳಲ್ಲಿ 90 ಕೋಟಿ ರೂಪಾಯಿ ಹಣವನ್ನು ಇಲಾಖೆ ನೀಡಬೇಕಿದ್ದರೂ ಕೇವಲ 7 ಕೋಟಿಯನ್ನಷ್ಟೇ ಜಮೆ ಮಾಡಿತ್ತು ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular