HomeLive NewsBREAKING: ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿತ: ಓರ್ವ ಕಾರ್ಮಿಕ ಸಾವು

BREAKING: ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿತ: ಓರ್ವ ಕಾರ್ಮಿಕ ಸಾವು

ಹುಬ್ಬಳ್ಳಿ: ಇತ್ತ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ ಮಾದಪಟ್ಟಣದ ಬಳಿ ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಬಂಡೆ ಬಿದ್ದು ಏಳು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿರುವ ಬೆನ್ನಲ್ಲೇ ಅತ್ತ ಹುಬ್ಬಳ್ಳಿಯಲ್ಲಿ ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕನೋರ್ವ ಮೃತಪಟ್ತಿರುವ ದಾರುಣ ಘಟನೆ ನಡೆದಿದೆ.

ರಾಜಕಾಲುವೆ ಸಂಪರ್ಕ ಕಲ್ಪಿಸಲು ಒಳಚರಂಡಿ ಕಾಮಗಾರಿ ನಡೆಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಹಳ್ಳಿಕೇರಿ ಗ್ರಾಮದ ಮಲ್ಲಪ್ಪ ಜೋಗಿನ್ ಮೃತ ದುರ್ದೈವಿ. ಹುಬ್ಬಳ್ಳಿಯ ಗುಜರಾತ್ ಭವನದ ಬಳಿ ಈ ದುರಂತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಲ್ಲಪ್ಪ ಗುಂಡಿಗಿಳಿದು ಮಣ್ಣು ತೆಗೆಯುತ್ತಿದ್ದ ವೇಳೆ ಅವರ ಮೇಲೆ ಮಣ್ಣು ಕುಸಿದು ಬಿದ್ದಿದೆ. ಗುಂಡಿಯೊಳಗೆ ಸಿಲುಕಿದ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವುದೇ ಈದುರಂತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular