HomeLatest Newsರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರ ಅಂಗಾಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿ ಕಾಮುಕರಿಂದ ಟಾರ್ಚರ್

ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರ ಅಂಗಾಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿ ಕಾಮುಕರಿಂದ ಟಾರ್ಚರ್

ಹುಬ್ಬಳ್ಳಿ: ಇತ್ತೀಚಿನ ದಿನಗಳಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿ ಒಂದಲ್ಲ ಒಂದು ಕಾರಣಕ್ಕೆ ಭಾರಿ ಸುದ್ದಿಯಾಗುತ್ತಲೇ ಇದೆ. ಲವ್ ಜಿಹಾದ್ ಪ್ರಕರಣಗಳ ಬಳಿಕ ಇದೀಗ ಪುಂಡರ ಅಟ್ಟಹಾಸ ಹುಬ್ಬಳಿಯಲ್ಲಿ ಮಿತಿ ನೀರಿದೆ. ರಸ್ತೆಯಲ್ಲಿ ನಡೆದು ಹೋಗುವ ಯುವತಿಯರಿಗೆ ಕಾಮುಕರು ಇನ್ನಿಲ್ಲದ ಕಾಟ ಕೊಡುತ್ತಿದ್ದಾರೆ.

ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರಿಗೆ ರೋಡ್ ರೋಮಿಯೋಗಳು, ಹಾಡಹಗಲೇ ಅಂಗಾಂಗ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿರುವ ಘಟನೆ ಬೆಳಕಿಗೆ ಬಂದಿವೆ.

ಹುಬ್ಬಳ್ಳಿ ನಗರದ ದೇಶಪಾಂಡೆ ನಗರದಲ್ಲಿ ಇಂತಹದ್ದೇ ಒಂದು ಆಘಾತಕಾರಿ ಘಟನೆ ನಡೆದಿದೆ. ರಸ್ತೆಯಲ್ಲಿ ಒಂಟಿಯಾಗಿ ಹೋಗುತ್ತಿದ್ದ ಯುವತಿಯನ್ನು ಹಿಂಬಾಲಿಸಿಕೊಂಡು ಬೈಕ್‌ನಲ್ಲಿ ಬಂದ ಮೂವರು ಯುವಕರು, ಯುವತಿಯ ಹಿಂಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದಾರೆ. ಈ ಕೃತ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹಾಡಹಗಲೇ ನಡು ರಸ್ತೆಯಲ್ಲಿ ನಡೆಯುತ್ತಿರುವ ಇಂತಹ ನೀಚ ಕೃತ್ಯಗಳಿಂದ ಮಹಿಳೆಯರು ಕಂಗಾಲಾಗಿದ್ದಾರೆ. ಪೊಲೀಸರು ಕೂಡಲೇ ಕಾಮುಕರ ಅಟ್ಟಹಾಸ ಮಟ್ಟಹಾಕಬೇಕು ಎಂದು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular