HomeLatest NewsBIG NEWS: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಮೂವರು ಅಪ್ರಾಪ್ತರು ಪೊಲೀಸ್ ವಶಕ್ಕೆ

BIG NEWS: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಮೂವರು ಅಪ್ರಾಪ್ತರು ಪೊಲೀಸ್ ವಶಕ್ಕೆ

ಹುಬ್ಬಳ್ಳಿ: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚುತ್ತಿವೆ. ಅಪ್ರಾಪ್ತ ಬಾಲಕಿ ಮೇಲೆ ಮೂವರು ಅಪ್ರಾಪ್ತರು ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೇಸ್ ದಾಖಲಾಗುತ್ತಿದ್ದಂತೆ ಶಹರ ಠಾಣೆ ಪೊಲೀಸರು ಮೂವರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದಿದ್ದಾರೆ. ಮೂವರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.

ಅಪ್ರಾಪ್ತ ಬಾಲಕಿ ಮೇಲೆ ಮೂವರಿಂದ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಶಶಿಕುಮಾರ್, ಮಕ್ಕಳ ಮೇಲೆ ಪೋಷಕರು ನಿಗಾವಹಿಸಬೇಕು, ಮಕ್ಕಳು ಬಿಡುವಿನ ಸಂದರ್ಭಗಳಲ್ಲಿ ಯಾರ ಜೊತೆ ಒಡಾಡುತ್ತಿದ್ದಾರೆ ಎಂಬುದನ್ನು ಗಮನಿಸಬೇಕು. ಇಲ್ಲವಾದಲ್ಲಿ ಮಕ್ಕಳು ಇಂತಹ ಅಪರಾಧಗಳನ್ನು ಎಸಗಿ ತಮ್ಮ ಭವಿಷ್ಯವನ್ನು ತಾವೇ ಹಾಳುಮಾಡಿಕೊಂಡು ಭವಿಷ್ಯವನ್ನೇ ಕಳೆದುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular