HomeKarnatakaBREAKING: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಅಪಾರ ನಗದು ಜಪ್ತಿ, ಉದ್ಯಮಿ ವಶಕ್ಕೆ

BREAKING: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಅಪಾರ ನಗದು ಜಪ್ತಿ, ಉದ್ಯಮಿ ವಶಕ್ಕೆ

ಬೆಂಗಳೂರು: ಲೋಕಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದು, ದಾಖಲೆಯಿಲ್ಲದೆ ಸಾಧಿಸುತ್ತಿದ್ದ 7 ಲಕ್ಷ ರೂಪಾಯಿಯನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಜಾಸ್ ಟೋಲ್ ನಲ್ಲಿ ಘಟನೆ ನಡೆದಿದೆ. ಕಾರ್ ನಲ್ಲಿದ್ದ ತಮಿಳುನಾಡು ಉದ್ಯಮ ರಘುಪತಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನಿಂದ ತುಮಕೂರು ಮಾರ್ಗದಲ್ಲಿ ರಘುಪತಿ ತೆರಳುತ್ತಿದ್ದರು. ದಾಖಲೆ ಇಲ್ಲದ ಹಣ ಸಾಗಿಸುತ್ತಿದ್ದ ಹಿನ್ನಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ನೆಲಮಂಗಲ ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular