ದಾವಣಗೆರೆಯ ಸರ್ಕಾರಿ ಕಲಾ ಕಾಲೇಜಿನಲ್ಲಿ ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ ಸಂಯುಕ್ತವಾಗಿ ಈ ಮೇಳವನ್ನು ಆಯೋಜಿಸಿವೆ.
ಈ ಉದ್ಯೋಗ ಮೇಳದಲ್ಲಿ 40ಕ್ಕೂ ಹೆಚ್ಚು ಬಹುರಾಷ್ಟ್ರೀಯ ಕಂಪನಿಗಳು ಮತ್ತು ಕೈಗಾರಿಕೆಗಳು ಭಾಗವಹಿಸುತ್ತಿವೆ. ವಿವಿಧ ಕ್ಷೇತ್ರಗಳಲ್ಲಿ 3000ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿವೆ. ಅರ್ಹ ಅಭ್ಯರ್ಥಿಗಳನ್ನು ನೇರವಾಗಿ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಈ ಮೇಳದ ಬಗ್ಗೆ ಮಾಹಿತಿ ನೀಡಿದ್ದಾರೆ.
ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 08192-259447 ಮತ್ತು 7892956667 ಸಂಖ್ಯೆಗಳನ್ನು ಸಂಪರ್ಕಿಸಬಹುದು.

