‘ಗೃಹಲಕ್ಷ್ಮಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ಇದುವರೆಗೆ 1.6 ಕೋಟಿ ಮಹಿಳೆಯರ ನೋಂದಣಿ

ಮೈಸೂರು : ಮನೆಯ ಯಜಮಾನಿಯರಿಗೆ 2,000 ರೂ. ಆರ್ಥಿಕ ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಈವರೆಗೆ 1.6 ಕೋಟಿ ಜನ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆ ನೋಂದಣಿ ಕಾರ್ಯಕ್ಕೆ ಯಾವುದೇ ಸಮಯ ನಿಗದಿ ಇಲ್ಲ. ಈ ತಿಂಗಳಲ್ಲಿ ನೋಂದಣಿ ಮಾಡಿಸುವವರ ಸಂಖ್ಯೆ ಹೆಚ್ಚಬಹುದು. ಡಿಸೆಂಬರ್ ಅಥವಾ ಜನವರಿಯಲ್ಲಿ ಯುವನಿಧಿ ಯೋಜನೆ ಜಾರಿಯಾಗುತ್ತೆ ಎಂದು ತಿಳಿಸಿದ್ದಾರೆ.

ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ 2 ವರ್ಷಗಳವರೆಗೆ ಅಂದರೆ 24 ತಿಂಗಳು ಡಿಪ್ಲೋಮಾ ಮಾಡಿದವರಿಗೆ 1,500 ರೂ. ಹಾಗೂ ಪದವೀಧರರಿಗೆ 3000 ರೂ. ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನರಿಯಲ್ಲಿ ಜಾರಿಗೆ ತರುತ್ತೇವೆ ಎಂದು ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read