BIG NEWS : ‘ಯುವನಿಧಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ರಾಜ್ಯಾದ್ಯಂತ ಇದುವರೆಗೆ 61,700 ಅರ್ಜಿ ಸಲ್ಲಿಕೆ

ಬೆಂಗಳೂರು: ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ವ್ಯಕ್ತವಾಗಿದ್ದು, ರಾಜ್ಯಾದ್ಯಂತ 61,700 ಮಂದಿ ಅರ್ಜಿ ಸಲ್ಲಿಸಿದ್ದಾರೆ.

ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವ ಶರಣ ಪ್ರಕಾಶ್ ಪಾಟೀಲ ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಸ್ತುತ 61,700 ಪದವಿ/ ಡಿಪ್ಲೊಮಾ ಹೊಂದಿದ ಅಭ್ಯರ್ಥಿಗಳು ಈ ಯೋಜನೆಯಡಿ ಆನ್ಲೈನ್ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. 2022-23ರಲ್ಲಿ ಒಟ್ಟು 5.29 ಲಕ್ಷ ವಿದ್ಯಾರ್ಥಿಗಳು ಪದವಿ/ ಡಿಪ್ಲೊಮಾ ಮುಗಿಸಿದ್ದಾರೆ” ಎಂದರು. ಸರ್ಕಾರ ಕಲಿಕೆ ಜೊತೆಗೆ ಕೌಶಲ್ಯಾಭಿವೃದ್ದಿ ಇಲಾಖೆ ಮೂಲಕ ಕೌಶಲ್ಯವನ್ನು ಕಲಿಸಲಾಗುತ್ತಿದ್ದು ಸರ್ಕಾರ ಯುವಜನತೆಗೆ ನಿರುದ್ಯೋಗ ಸಮಸ್ಯೆ ಎದುರಿಸಲು ಎಲ್ಲ ರೀತಿಯ ಸಹಕಾರ ನೀಡುತ್ತಿದೆ. ಇದರ ಸದುಪಯೋಗ ಪಡೆಯಬೇಕು” ಎಂದು ಕರೆ ನೀಡಿದರು.

ಈ ಯೋಜನೆಯಡಿ ಪದವಿ ಪಾಸಾದವರಿಗೆ ರೂ.3000 ಮತ್ತು ಡಿಪ್ಲೋಮಾ ಪಾಸಾದವರಿಗೆ ರೂ.1500ಗಳನ್ನು ನೀಡಲಾಗುತ್ತದೆ. ಅರ್ಹರು ಸೇವಾ ಸಿಂಧು ಪೋರ್ಟಲ್, ಅಟಲ್ ಜೀ ಕೇಂದ್ರ, ಕರ್ನಾಟಕ-1 ಮತ್ತು ಇತರೆ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಸಿಕೊಳ್ಳಬಹುದು.

ಯುವನಿಧಿಗೆ ನಾಳೆ ಚಾಲನೆ

ಯುವನಿಧಿ ಯೋಜನೆಗೆ ನಾಳೆ ಶಿವಮೊಗ್ಗದಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಯುವಜನರಲ್ಲಿ ದೇಶದ ಭವಿಷ್ಯವನ್ನು ಕಂಡಿದ್ದ ಸ್ವಾಮಿ ವಿವೇಕಾನಂದರ ಜನ್ಮದಿನದಂದೇ ನಮ್ಮ ಸರ್ಕಾರವು ಯುವನಿಧಿ ಯೋಜನೆಗೆ ಚಾಲನೆ ನೀಡುವ ಮೂಲಕ ವಿವೇಕಾನಂದರ ಕನಸಿನ ಯುವ ಭಾರತ ನಿರ್ಮಾಣಕ್ಕೆ ಮುಂದಡಿಯಿಡಲಿದೆ. ಯುವನಿಧಿಯ ಅನುಷ್ಠಾನದೊಂದಿಗೆ ಚುನಾವಣಾ ಪೂರ್ವದಲ್ಲಿ ನುಡಿದಂತೆ ನಮ್ಮ ಐದೂ ಗ್ಯಾರಂಟಿ ಯೋಜನೆಗಳು ಅನುಷ್ಠಾನಗೊಳ್ಳಲಿವೆ. ನಾಳೆ ಶಿವಮೊಗ್ಗದಲ್ಲಿ ನಡೆಯುವ ಈ ಸಮಾರಂಭಕ್ಕೆ ಅತಿಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಯುವಸಬಲೀಕರಣದ ಐತಿಹಾಸಿಕ ಕ್ಷಣಗಳಿಗೆ ನಮ್ಮ ಜೊತೆಯಾಗಬೇಕು ಎಂದು ಮನವಿ ಮಾಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read