HomeKarnatakaBREAKING : CM ಸಿದ್ದರಾಮಯ್ಯರ ಕಾವೇರಿ ನಿವಾಸದ ಬಳಿ ಧರೆಗುರುಳಿದ ಬೃಹತ್ ಮರಗಳು, ತಪ್ಪಿದ ಭಾರಿ ದುರಂತ.!

BREAKING : CM ಸಿದ್ದರಾಮಯ್ಯರ ಕಾವೇರಿ ನಿವಾಸದ ಬಳಿ ಧರೆಗುರುಳಿದ ಬೃಹತ್ ಮರಗಳು, ತಪ್ಪಿದ ಭಾರಿ ದುರಂತ.!

ಬೆಂಗಳೂರು: ರಾಜಧಾನಿಯಲ್ಲಿ ವರುಣನ ಅಟ್ಟಹಾಸ ಮುಂದುವರಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸ ‘ಕಾವೇರಿ’ಯ ಮುಂಭಾಗದಲ್ಲೇ ಬೃಹತ್ ಮರವೊಂದು ಬುಡಸಮೇತ ಉರುಳಿ ಬಿದ್ದಿದೆ.

 4-5 ಮರವು ಕಾವೇರಿ ನಿವಾಸದ ಕಾಂಪೌಂಡ ಮೇಲೆ ಉರುಳಿ ಬಿದ್ದಿದೆ. ಅದೃಷ್ಟವಶಾತ್ ದೊಡ್ಡ ಮಟ್ಟದ ಅನಾಹುತವೊಂದು ತಪ್ಪಿದಂತಾಗಿದೆ . ಮರ ಬಿದ್ದ ತಕ್ಷಣ ಎಚ್ಚೆತ್ತ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಸಿಎಂ ನಿವಾಸದ ಸುತ್ತಮುತ್ತಲಿನ ರಸ್ತೆಗಳನ್ನು ಬಂದ್ ಮಾಡಿದರು. ಈ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಮಣ್ಣು ಸಡಿಲಗೊಂಡು ಮರ ಉರುಳಿರಬಹುದು ಎಂದು ಶಂಕಿಸಲಾಗಿದೆ.

ಬೆಂಗಳೂರಿನಲ್ಲಿ ಕಳೆದ 25 ವರ್ಷಗಳಲ್ಲಿ ದಾಖಲಾದ ಅತಿ ಹೆಚ್ಚು ಮಳೆ ಇದಾಗಿದ್ದು, ನಗರದಾದ್ಯಂತ 170ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ. ಸಿಎಂ ನಿವಾಸದ ಬಳಿಯೇ ನಡೆದ ಈ ಘಟನೆಯು ಹಳೆಯ ಮರಗಳ ನಿರ್ವಹಣೆಯ ಬಗ್ಗೆ ಆತಂಕ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular