HomeKarnatakaBIG NEWS : 'ಹುಲಿಕಲ್ ಘಾಟಿ' ದುರಂತ ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ...

BIG NEWS : ‘ಹುಲಿಕಲ್ ಘಾಟಿ’ ದುರಂತ ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ CM ಸಿದ್ದರಾಮಯ್ಯ.!

ಶಿವಮೊಗ್ಗ :  ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಸಂಭವಿಸಿದ ಮಣ್ಣು ಕುಸಿತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟ ಘಟನೆಗೆ ಮುಖ್ಯಮಂತ್ರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಘಟನೆಯ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಚರ್ಚಿಸಿ ಮಾಹಿತಿ ಪಡೆದಿರುವ ಅವರು, ಕುಟುಂಬಕ್ಕೆ ಆಧಾರವಾಗಿದ್ದ ಜೀವಗಳನ್ನು ಕಳೆದುಕೊಂಡ ಸಂತ್ರಸ್ತ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಕೋರಿರುವ ಅವರು, ಈ ಕಠಿಣ ಸಮಯದಲ್ಲಿ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟ ಸುದ್ದಿ ಕೇಳಿ‌ ದುಃಖವಾಯಿತು. ಮೃತ ದುರ್ದೈವಿ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಘಟನೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ಮಾತುಕತೆ ನಡೆಸಿ, ಮಾಹಿತಿ ಪಡೆದಿದ್ದೇನೆ. ಕುಟುಂಬಕ್ಕೆ ಆಧಾರವಾಗಿದ್ದ ದುಡಿಯುವ ಜೀವಗಳು ಈ ಘಟನೆಯಲ್ಲಿ ಬಲಿಯಾಗಿದ್ದು, ಮಾನವೀಯ ನೆಲೆಯಲ್ಲಿ ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಏನಿದು ಘಟನೆ

ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಸಂಭವಿಸಿದ ಮಣ್ಣು ಕುಸಿತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಾಟ್ ರಸ್ತೆಯ ತಿರುವಿನಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಮಣ್ಣಿನ ರಾಶಿ ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ.

ಹುಲಿಕಲ್ ಘಾಟಿಯ ರಸ್ತೆ ಸುಧಾರಣಾ ಯೋಜನೆಯಡಿ ತಡೆಗೋಡೆ ನಿರ್ಮಿಸುವ ಕೆಲಸ ನಡೆಯುತ್ತಿತ್ತು. ಈ ವೇಳೆ ಕಾರ್ಮಿಕರು ತಳಪಾಯದ ಬಳಿ ಕೆಲಸ ಮಾಡುತ್ತಿದ್ದಾಗ ಮೇಲ್ಭಾಗದಿಂದ ಭಾರಿ ಪ್ರಮಾಣದ ಮಣ್ಣು ಮತ್ತು ಕಲ್ಲುಗಳು ಕುಸಿದು ಬಿದ್ದಿವೆ. ಮಣ್ಣಿನ ಅಡಿ ಸಿಲುಕಿದ ಮೂವರು ಕಾರ್ಮಿಕರು ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular