HomeLatest Newsಹುಲಿಕಲ್ ಘಾಟ್ ನಲ್ಲಿ ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವು ಪ್ರಕರಣ: ಮೃತರ ಕುಟುಂಬಕ್ಕೆ ಪರಿಹಾರ...

ಹುಲಿಕಲ್ ಘಾಟ್ ನಲ್ಲಿ ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವು ಪ್ರಕರಣ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ: ಹುಲಿಕಲ್ ಘಾಟ್​ನ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕೂಲಿ ಕಾರ್ಮಿಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ.

ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಇದೇ ವೇಳೆ ಮಾನವೀಯ ನೆಲೆಯಲ್ಲಿ ಸರ್ಕಾರದಿಂದ ಮೃತರ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಇದೇ ವೇಳೆ ಆಸ್ಪತ್ರೆಗೆಾಖಲಾಗಿರುವ ಗಾಯಾಳುಗಳು ಬೇಗನೇ ಗುಣಮುಖರಾಗಲಿ ಎಂದು ತಿಳಿಸಿದ್ದಾರೆ.

ಹುಲಿಕಲ್ ಘಾಟ್​ನ ಶ್ರೀ ಚಂಡಿಕಾ ಪರಮೇಶ್ವರಿ ದೇವಾಲಯದ ಹಂಬದಿಯ ಹೇರ್ ಪಿನ್ ತಿರುವಿನಲ್ಲಿ ಇತ್ತಿಚೇಗೆ ಸುರಿದ ಮಳೆಯಿಂದ ಮಣ್ಣು ಕುಸಿತವಾಗಿತ್ತು. ಇದರ ಕಾಮಗಾರಿಯನ್ನು ನಡೆಸುವಾಗ ಮಣ್ಣು ಕುಸಿತವಾಗಿದೆ.‌ ಕೆಳಗಡೆ ಕಾಮಗಾರಿ‌ ಕೆಲಸ‌ ಮಾಡುತ್ತಿದ್ದವರ ಮೇಲೆಯೇ ಮಣ್ಣು ಕುಸಿದ ಪರಿಣಾಮ ಮಣ್ಣಿನ ಅಡಿ‌ ಕಾಮಗಾರಿಯಲ್ಲಿ ತೊಡಗಿಕೊಂಡಿದ್ದವರು ಸಿಲುಕಿಕೊಂಡಿದ್ದಾರೆ. ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಇಬ್ ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಕ್ಕಾರು ನಗರದ ರಾಘವೇಂದ್ರ(37), ಹಾವೇರಿ ಜಿಲ್ಲೆಯ ರಾಜು(30) ಹಾಗೂ ಶಬ್ಬಿರ್(30) ಮೃತ ಕಾರ್ಮಿಕರು. ಸುಮಂತ್ ಹಾಗೂ ಪರಮೇಶ್ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular