HomeKarnatakaಹುಲಿಕಲ್ ಘಾಟ್‌ನಲ್ಲಿ ಮತ್ತೆ ಭೂಕುಸಿತ: ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ ತಾತ್ಕಾಲಿಕ ಬಂದ್

ಹುಲಿಕಲ್ ಘಾಟ್‌ನಲ್ಲಿ ಮತ್ತೆ ಭೂಕುಸಿತ: ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ ತಾತ್ಕಾಲಿಕ ಬಂದ್

ಶಿವಮೊಗ್ಗ: ಹುಲಿಕಲ್ ಘಾಟ್‌ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಈ ಬಗ್ಗೆ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಸ್ತೆಯ ಸುರಕ್ಷತಾ ಕಾಮಗಾರಿ ಮುಗಿಯುವವರೆಗೆ ಈ ನಿರ್ಬಂಧ ಅನ್ವಯವಾಗಲಿದೆ. ಎಲ್ಲಾ ವಾಹನಗಳಿಗೂ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುಲಿಕಲ್ ಘಾಟಿಯಲ್ಲಿ ಸುಮಾರು 5 ಅಡಿ ಅಗಲದವರೆಗೆ ಮತ್ತೊಮ್ಮೆ ಭೂಕುಸಿತ ಉಂಟಾದ ಹಿನ್ನೆಲೆ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.

ಕಾಂಕ್ರೀಟ್ ರಸ್ತೆಯಲ್ಲಿ ಅಲ್ಲಲ್ಲಿ ಬಿರುಕುಗಳು ಕಂಡು ಬಂದ ಹಿನ್ನೆಲೆ ಸುರಕ್ಷತಾ ದೃಷ್ಟಿಯಿಂದ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಘಾಟ್​​ನ ಹೇರ್‌ಪಿನ್ ತಿರುವಿನಲ್ಲಿ ರಕ್ಷಣಾತ್ಮಕ ಕಾಮಗಾರಿಯೂ ಪೂರ್ಣಗೊಳ್ಳುವವರೆಗೆ ಈ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೂ ಇದು ಅನ್ವಯವಾಗಲಿದೆ. ಪರ್ಯಾಯ ಮಾರ್ಗಗಳಲ್ಲಿ ತಾತ್ಕಾಲಿಕವಾಗಿ ಸಂಚರಿಸಲು ಸೂಚಿಸಲಾಗಿದೆ.

ಪರ್ಯಾಯ ಮಾರ್ಗಗಳು:
ತೀರ್ಥಹಳ್ಳಿ ಕಡೆಯಿಂದ ಕುಂದಾಪುರ ಕಡೆಗೆ ತೆರಳುವ ವಾಹನಗಳು, ತೀರ್ಥಹಳ್ಳಿ-ರಾವೆ-ಕಾನುಗೋಡು-ನಗರ-ಕೊಲ್ಲೂರು ಮೂಲಕ ಕುಂದಾಪುರಕ್ಕೆ ತೆರಳಬೇಕು.
ತೀರ್ಥಹಳ್ಳಿಯಿಂದ ಯಡೂರು, ಹುಲಿಕಲ್​​ ಮಾರ್ಗವಾಗಿ ತೆರಳುವವರು ತೀರ್ಥಹಳ್ಳಿ-ಯಡೂರು, ಮಾಸ್ತಿಕಟ್ಟೆ- ಕಾನುಗೋಡು-ನಗರ-ಕೊಲ್ಲೂರು ಮೂಲಕ ಕುಂದಾಪುರಕ್ಕೆ ಸಂಚರಿಸಬೇಕು.
ಶಿವಮೊಗ್ಗ/ಸಾಗರ ಕಡೆಯಿಂದ ಹೊಸನಗರ ಮೂಲಕ ತೆರಳುವವರು ಶಿವಮೊಗ್ಗ-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳಿ ಭಟ್ಕಳ-ಬೈಂದೂರು ಮಾರ್ಗವಾಗಿ ಕುಂದಾಪುರಕ್ಕೆ ತೆರಳಬೇಕು.

ಎರಡು ದಿನಗಳ ಹಿಂದೆ ಹುಲಿಕಲ್ ಘಾಟ್​ನಲ್ಲಿ ರಸ್ತೆ ಕಾಮಗಾರಿ ವೇಳೆ ಗುಡ್ಡ ಕುಸಿದು ಮೂವರು ಮೃತಪಟ್ಟಿರುವ ಘಟನೆ ನಡೆದಿತ್ತು. ಅವಘಡದಲ್ಲಿ ರಾಘವೇಂದ್ರ(37), ರಾಜು(30) ಮತ್ತು ಶಬ್ಬೀರ್(40) ಮೃತಪಟ್ಟಿದ್ದರು. ಸುಮಂತ ಮತ್ತು ಪರಮೇಶ್​ ಸೇರಿ ನಾಲ್ವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಮಾಸುವ ಮುನ್ನವೇ ರಸ್ತೆಯ ಕೆಲವೆಡೆ ಅಪಾಯದ ಮುನ್ಸೂಚನೆ ಸಿಕ್ಕ ಹಿನ್ನೆಲೆ ಜಿಲ್ಲಅಧಿಕಾರಿಗಳು ವಾಹನ ಸಂಚಾರ ನಿಷೇಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular