ಶಿವಮೊಗ್ಗ: ಖಾಸಗಿ ಬಸ್ ವೊಂದು ಹುಲಿಕಲ್ ಘಾಟ್ ನಲ್ಲಿ ಅಪಘಾತಕ್ಕೀಡಾಗಿದ್ದು, ಮಗುವೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ.
ದಾವಣಗೆರೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ದುರ್ಗಾಂಬಾ ಹುಲಿಕಲ್ ಘಾಟ್ ನಲ್ಲಿ ರಸ್ತೆ ಪಕ್ಕದ ಗುಡ್ದಕ್ಕೆ ಗುದ್ದಿದೆ. ಪರಿಣಾಮ ಬಸ್ ನಲ್ಲಿದ್ದ ಮಗು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಗಾಯಾಳುಗಳನ್ನು ಉಡುಪಿಯ ಆದರ್ಶ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ದುರ್ಗಾಂಬ ಬಸ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

