ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ: ಅತ್ಯಾಕರ್ಷಕ ಪ್ರಶಸ್ತಿ, ಬಹುಮಾನ ಗೆಲ್ಲುವ ಅವಕಾಶ

ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್‌ 15ರ ಬೆಳಗ್ಗೆ 9.30 ರಿಂದ 10 ಗಂಟೆಯ ವರೆಗೆ ಬೀದರ್‌ನಿಂದ ಚಾಮರಾಜನಗರದ ವರೆಗೆ 2,500 ಕಿ.ಮೀ ಉದ್ದದ ಮಾನವ ಸರಪಳಿ ನಿರ್ಮಿಸುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಈ ದಿನವನ್ನು ಮತ್ತಷ್ಟು ಸ್ಮರಣೀಯವಾಗಿಸಲು ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಅತ್ಯಾಕರ್ಷಕ ಪ್ರಶಸ್ತಿಗಳು ಹಾಗೂ ಬಹುಮಾನಗಳು ಇರಲಿವೆ. ಹೆಚ್ಚಿನ ಮಾಹಿತಿಗೆ https://democracydaykarnataka.in/kn ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಅತ್ಯಾಕರ್ಷಕ ಪ್ರಶಸ್ತಿಗಳು ಮತ್ತು ಬಹುಮಾನಗಳನ್ನು ಗೆಲ್ಲುವ ಅವಕಾಶವಿದೆ.

5 ವಿಭಾಗಗಳಲ್ಲಿ 15 ಪ್ರಶಸ್ತಿಗಳು, ಪ್ರತಿ ವಿಭಾಗಕ್ಕೆ ತಲಾ 3 ಪ್ರಶಸ್ತಿಗಳನ್ನು ನೀಡಲಾಗುವುದು.

ಮಾನವ ಸರಪಳಿಯಲ್ಲಿ ನಾವೀನ್ಯತೆ

ಅತಿ ಹೆಚ್ಚು ಗಿಡಗಳನ್ನು ನೆಡುವುದು

ಅತಿ ಹೆಚ್ಚು ಸರ್ಕಾರೇತರ ಸಂಸ್ಥೆಗಳ ಪಾಲ್ಗೊಳ್ಳುವಿಕೆ

ಅತಿ ಹೆಚ್ಚು ಖಾಸಗಿ ವಲಯದ ಪಾಲ್ಗೊಳ್ಳುವಿಕೆ

ಅತ್ಯಂತ ಉದ್ದದ ಮಾನವ ಸರಪಳಿ (ಜಿಲ್ಲಾ ಸಂಖ್ಯಾ ಅನುಗುಣವಾಗಿ) ಪ್ರಶಸ್ತಿ ನೀಡಲಾಗುವುದು

ಹೆಚ್ಚಿನ ಮಾಹಿತಿಗಾಗಿ: 9482 300 400 ಸಂಪರ್ಕಿಸಿ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read